ಶ್ರದ್ಧಾ ಹತ್ಯೆ ಪ್ರಕರಣ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಆರೋಪಿ ಅಫ್ತಾಬ್, ನಾಳೆ ವಿಚಾರಣೆ ಸಾಧ್ಯತೆ

ತನ್ನೊಂದಿಗೆ ಲಿವ್ ಇನ್ ರಿಲೇಶನ್ ಶಿಫ್ ನಲ್ಲಿದ್ದ ಶ್ರದ್ಧಾ ವಾಕರ್ ನನ್ನು ಭೀಕರವಾಗಿ ಕೊಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆಫ್ತಾಬ್ ಅಮೀನ್ ಪೂನಾವಾಲಾ ಶುಕ್ರವಾರ ಜಾಮೀನು ಕೋರಿ ಇಲ್ಲಿನ ನ್ಯಾಯಾಲಯಕ್ಕೆ ಅರ್ಜಿ...
ಅಫ್ತಾಬ್ ಅಮೀನ್ ಪೂನಾವಾಲಾ
ಅಫ್ತಾಬ್ ಅಮೀನ್ ಪೂನಾವಾಲಾ
Updated on

ನವದೆಹಲಿ: ತನ್ನೊಂದಿಗೆ ಲಿವ್ ಇನ್ ರಿಲೇಶನ್ ಶಿಫ್ ನಲ್ಲಿದ್ದ ಶ್ರದ್ಧಾ ವಾಕರ್ ನನ್ನು ಭೀಕರವಾಗಿ ಕೊಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆಫ್ತಾಬ್ ಅಮೀನ್ ಪೂನಾವಾಲಾ ಶುಕ್ರವಾರ ಜಾಮೀನು ಕೋರಿ ಇಲ್ಲಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವೃಂದಾ ಕುಮಾರಿ ಅವರ ಮುಂದೆ ಶನಿವಾರ ಜಾಮೀನು ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ಪ್ರಕರಣದ ಪ್ರಾಥಮಿಕ ತನಿಖೆ ಪೂರ್ಣಗೊಂಡಿದ್ದು, ಆರೋಪಪಟ್ಟಿ ಇನ್ನೂ ಸಲ್ಲಿಕೆಯಾಗಬೇಕಿರುವುದರಿಂದ ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿಡುವ ಅಗತ್ಯ ಇಲ್ಲ ಎಂದು ವಕೀಲರು ತಿಳಿಸಿದ್ದಾರೆ.

ಡಿಸೆಂಬರ್ 9 ರಂದು ಪೂನಾವಾಲಾ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳವರೆಗೆ ವಿಸ್ತರಿಸಲಾಗಿದೆ.

ಅಫ್ತಾಬ್ ಪೂನಾವಾಲಾ ದೆಹಲಿಯ ಮೆಹ್ರೌಲಿಯಲ್ಲಿ ತನ್ನೊಂದಿಗೆ ಲಿವ್ ಇನ್ ರಿಲೇಶನ್ ಶಿಫ್ ನಲ್ಲಿದ್ದ ಶ್ರದ್ಧಾಳನ್ನು ಕತ್ತು ಹಿಸುಕಿ ಕೊಲೆ ಮಾಡಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ, ಸುಮಾರು ಮೂರು ವಾರಗಳ ಕಾಲ ಫ್ರಿಡ್ಜ್‌ನಲ್ಲಿಟ್ಟಿದ್ದನು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com