ಭಾರತ್ ಜೋಡೋ ಯಾತ್ರೆ ಮೇಲೆ ಕೋವಿಡ್ ಕಣ್ಗಾವಲು; ಕೇಂದ್ರದಿಂದ ರಾಜಕೀಯ ಎಂದ ಕಾಂಗ್ರೆಸ್

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕೋವಿಡ್ -19 ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಅಥವಾ "ರಾಷ್ಟ್ರೀಯ ಹಿತಾಸಕ್ತಿಯ" ದೃಷ್ಟಿಯಿಂದ ಯಾತ್ರೆಯನ್ನು ರದ್ದುಗೊಳಿಸಬೇಕು...
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ
Updated on: 

ನವದೆಹಲಿ: ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕೋವಿಡ್ -19 ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಅಥವಾ "ರಾಷ್ಟ್ರೀಯ ಹಿತಾಸಕ್ತಿಯ" ದೃಷ್ಟಿಯಿಂದ ಯಾತ್ರೆಯನ್ನು ರದ್ದುಗೊಳಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆದು ಕೇಳಿಕೊಂಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವರ ಪತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಕೇಂದ್ರ ಸರ್ಕಾರ ಇದರಲ್ಲೂ "ರಾಜಕೀಯ" ಮಾಡುತ್ತಿದೆ ಎಂದು ಆರೋಪಿಸಿದೆ.

ಮಾಂಡವಿಯಾ ಅವರು ಡಿಸೆಂಬರ್ 20ರಂದು ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ, ಮಾಸ್ಕ್ ಮತ್ತು ಸ್ಯಾನಿಟೈಸರ್ ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತಿಯೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಲಸಿಕೆ ಪಡೆದವರಿಗೆ ಮಾತ್ರ ಯಾತ್ರೆಯಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

"ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದಿಂದ ದೇಶವನ್ನು ಉಳಿಸಲು, ರಾಷ್ಟ್ರೀಯ ಹಿತಾಸಕ್ತಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸುವಂತೆ ನಾನು ನಿಮ್ಮನ್ನು ವಿನಂತಿಸುತ್ತೇನೆ" ಎಂದು ಕೇಂದ್ರ ಸಚಿವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಪತ್ರಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಮತ್ತು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಕೇಂದ್ರ ಸರ್ಕಾರ ಇದರಲ್ಲೂ ರಾಜಕಾರಣ ಮಾಡುತ್ತಿದೆ. ಸಾರ್ವಜನಿಕ ಆರೋಗ್ಯ ಗಂಭೀರ ವಿಷಯವಾಗಿದ್ದು, ಸರ್ಕಾರದ ಸಭೆಗಳಿಗೂ ಪ್ರೋಟೋಕಾಲ್ ಇದ್ದರೆ, ಭಾರತ್ ಜೋಡೋ ಯಾತ್ರೆಯು ಅದನ್ನು ಪಾಲಿಸುತ್ತದೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com