ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಹೊಸ ಮಾರ್ಗ ನೋಡುತ್ತಿರುವ ಬಿಜೆಪಿ: ಛತ್ತೀಸ್ ಗಢ ಮುಖ್ಯಮಂತ್ರಿ 

ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ 'ಭಾರತ್ ಜೋಡೋ ಯಾತ್ರೆ ನಿಲ್ಲಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಇದು ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗಿಸಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
ಛತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್
ಛತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್

ನವದೆಹಲಿ: ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ 'ಭಾರತ್ ಜೋಡೋ ಯಾತ್ರೆ ನಿಲ್ಲಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಇದು ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗಿಸಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಮನ್ಸುಖ್ ಮಾಂಡವೀಯಾ ಪತ್ರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಛತ್ತೀಸ್ ಗಢದ ಮುಖ್ಯಮಂತ್ರಿ, ಭೂಪೇಶ್ ಬಘೇಲ್, ಯಾತ್ರೆ ನಿಲ್ಲಿಸಲು ಬಿಜೆಪಿಯವರು ಹೊಸ ಮಾರ್ಗ ನೋಡುತ್ತಿದ್ದಾರೆ. ಒಂದು ವೇಳೆ ದೇಶದಲ್ಲಿ ಕೋವಿಡ್ -19 ಸೋಂಕು ಹೆಚ್ಚಾಗಿದ್ದರೆ ಯಾತ್ರೆ ಪರಿಣಾಮ ಬೀರುತಿತ್ತು. ಆದರೆ, ಇದೀಗ ಕೇಸ್ ಗಳೇ ಇಲ್ಲದಿರುವಾಗ ಬಿಜೆಪಿಯವರು ಏಕೆ ಹೊಸ ದಾರಿ ನೋಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಕೊರೊನಾ ಇದ್ದಾಗ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಉತ್ತರ ಪ್ರದೇಶದಲ್ಲಿ ಚುನಾವಣೆ ನಡೆಸಿದ್ದೀರಾ, ಇದೀಗ ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಹೊಸ ಹಾದಿ ನೋಡುತ್ತಿದ್ದೀರಾ ಎಂದು ಬಿಜೆಪಿ ವಿರುದ್ಧ ವಾಕ್ ಪ್ರಹಾರ ನಡೆಸಿದರು. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com