ಬಾಬಾ ರಾಮ್‌ದೇವ್ ಅಶ್ಲೀಲ ಕಾರ್ಟೂನ್ ಬಿಡಿಸಿದ್ದ ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಪ್ರಕರಣ ದಾಖಲು!

ಯೋಗ ಗುರು ರಾಮ್‌ದೇವ್ ಅಸಭ್ಯ ಮತ್ತು ಅಶ್ಲೀಲವಾಗಿ ಕಾರ್ಟೂನ್ ಬಿಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಆರೋಪದ ಮೇಲೆ ಡೆಹ್ರಾಡೂನ್ ಮೂಲದ ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಉತ್ತರಾಖಂಡ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.
ಯೋಗ ಗುರು ಬಾಬಾ ರಾಮದೇವ್
ಯೋಗ ಗುರು ಬಾಬಾ ರಾಮದೇವ್
Updated on

ಡೆಹ್ರಾಡೂನ್: ಯೋಗ ಗುರು ರಾಮ್‌ದೇವ್ ಅಸಭ್ಯ ಮತ್ತು ಅಶ್ಲೀಲವಾಗಿ ಕಾರ್ಟೂನ್ ಬಿಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಆರೋಪದ ಮೇಲೆ ಡೆಹ್ರಾಡೂನ್ ಮೂಲದ ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಉತ್ತರಾಖಂಡ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ. 

ಪತಂಜಲಿ ಯೋಗಪೀಠದ ಲೀಗಲ್ ಸೆಲ್ ನೀಡಿದ ದೂರಿನ ಆಧಾರದ ಮೇಲೆ ವ್ಯಂಗ್ಯಚಿತ್ರಕಾರರಾದ ಗಜೇಂದ್ರ ರಾವತ್ ಮತ್ತು ಹೇಮಂತ್ ಮಾಳವೀಯ ವಿರುದ್ಧ ಕಂಖಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಕಂಖಾಲ್ ಪೊಲೀಸ್ ಠಾಣೆ ಪ್ರಭಾರಿ ಮುಖೇಶ್ ಚೌಹಾಣ್ ತಿಳಿಸಿದ್ದಾರೆ.

ಯೋಗ ಗುರುವಿನ ಅಸಭ್ಯ ಮತ್ತು ಅಶ್ಲೀಲ ಪೋಸ್ಟರ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಮೂಲಕ ಅವರ ವರ್ಚಸ್ಸಿಗೆ ಕಳಂಕ ತಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಧಾರ್ಮಿಕ ಭಾವನೆಗಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು ತಲೆ ಮರೆಸಿಕೊಂಡಿರುವ ಅವರನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com