ಜನಸಂದಣಿ ಇರುವ ಸ್ಥಳಗಳಲ್ಲಿ ಮಾಸ್ಕ್ ಬಳಸಿ, ಕೋವಿಡ್ ಬೂಸ್ಟರ್ ಡೋಸ್ ತೆಗೆದುಕೊಳ್ಳಿ: ಡಾ. ವಿಕೆ ಪೌಲ್

ಭಾರತದ ಅರ್ಹ ಜನಸಂಖ್ಯೆಯ ಶೇ 27 ರಿಂದ 28ರಷ್ಟು ಜನರು ಮಾತ್ರ ಕೋವಿಡ್-19ರ ಬೂಸ್ಟರ್‌ ಡೋಸ್ ಅನ್ನು ತೆಗೆದುಕೊಂಡಿದ್ದಾರೆ ಮತ್ತು ಜನನಿಬಿಡ ಸ್ಥಳಗಳಲ್ಲಿ ಜಾಗ್ರತೆ ವಹಿಸಲು ಮತ್ತು ಮಾಸ್ಕ್ ಧರಿಸಲು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿಕೆ ಪೌಲ್ ಬುಧವಾರ ಸಲಹೆ ನೀಡಿದ್ದಾರೆ.
ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿಕೆ ಪೌಲ್
ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿಕೆ ಪೌಲ್
Updated on

ನವದೆಹಲಿ: ಭಾರತದ ಅರ್ಹ ಜನಸಂಖ್ಯೆಯ ಶೇ 27 ರಿಂದ 28ರಷ್ಟು ಜನರು ಮಾತ್ರ ಕೋವಿಡ್-19ರ ಬೂಸ್ಟರ್‌ ಡೋಸ್ ಅನ್ನು ತೆಗೆದುಕೊಂಡಿದ್ದಾರೆ ಮತ್ತು ಜನನಿಬಿಡ ಸ್ಥಳಗಳಲ್ಲಿ ಜಾಗ್ರತೆ ವಹಿಸಲು ಮತ್ತು ಮಾಸ್ಕ್ ಧರಿಸಲು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿಕೆ ಪೌಲ್ ಬುಧವಾರ ಸಲಹೆ ನೀಡಿದ್ದಾರೆ.

ಜನರು ಭಯಭೀತರಾಗಬೇಡಿ ಎಂದ ಅವರು, ಅಂತರರಾಷ್ಟ್ರೀಯ ವಿಮಾನ ಪ್ರಯಾಣದ ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

'ಜನಸಂದಣಿ ಇರುವ ಪ್ರದೇಶಗಳಲ್ಲಿ ಜನರು ಮಾಸ್ಕ್ ಧರಿಸಬೇಕು. ಹೃದಯ ರೋಗ, ಬಿಪಿ, ಉಸಿರಾಟದ ತೊಂದರೆ ಇರುವವರು ಅಥವಾ ವಯಸ್ಸಾದವರು ವಿಶೇಷವಾಗಿ ಇದನ್ನು ಅನುಸರಿಸಬೇಕು' ಎಂದು ಪೌಲ್ ಹೇಳಿದರು.

ಜಾಗತಿಕವಾಗಿ, ವಿಶೇಷವಾಗಿ ಚೀನಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಮಧ್ಯೆ ಕೇಂದ್ರ ಆರೋಗ್ಯ ಸಚಿವ ಮನ್‌ಲುಖ್ ಮಾಂಡವಿಯಾ ಅವರು ನಡೆಸಿದ ಪರಿಶೀಲನಾ ಸಭೆಯ ನಂತರ ಪೌಲ್ ಈ ಹೇಳಿಕೆಗಳನ್ನು ನೀಡಿದ್ದಾರೆ.

'ಕೆಲವು ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ದೃಷ್ಟಿಯಿಂದ, ನಾನು ಇಂದು ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದ್ದೇನೆ. ಕೋವಿಡ್ ಇನ್ನೂ ಮುಗಿದಿಲ್ಲ. ಎಲ್ಲರು ಎಚ್ಚರದಿಂದ ಇರುವಂತೆ ಮತ್ತು ಕಣ್ಗಾವಲು ಬಲಪಡಿಸುವಂತೆ ಸೂಚಿಸಿದ್ದೇನೆ. ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ನಾವು ಸಿದ್ಧರಿದ್ದೇವೆ' ಎಂದು ಮಾಂಡವಿಯಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಆರೋಗ್ಯ ಕಾರ್ಯದರ್ಶಿಗಳು, ಔಷಧೀಯ ಇಲಾಖೆ, ಜೈವಿಕ ತಂತ್ರಜ್ಞಾನ ಇಲಾಖೆ, ಆಯುಷ್, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಹಾನಿರ್ದೇಶಕ ರಾಜೀವ್ ಬಹ್ಲ್, ಪೌಲ್ ಮತ್ತು ಇಮ್ಯುನೈಸೇಶನ್ ಕುರಿತಾದ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್‌ಟಿಎಜಿಐ) ಅಧ್ಯಕ್ಷ ಡಾ ಎನ್.ಕೆ. ಅರೋರಾ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

ಜಪಾನ್, ಅಮೆರಿಕ, ರಿಪಬ್ಲಿಕ್ ಆಫ್ ಕೊರಿಯಾ, ಬ್ರೆಜಿಲ್ ಮತ್ತು ಚೀನಾದಲ್ಲಿ ಪ್ರಕರಣಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ಹೊಸ ರೂಪಾಂತರಗಳನ್ನು ಟ್ರ್ಯಾಕ್ ಮಾಡಲು  ವೈರಾಣುವಿನ ವಂಶವಾಹಿಗಳ ಸಂರಚನೆಯ ವಿಶ್ಲೇಷಣೆಗಾಗಿ (ಜೀನೋಮ್‌ ಸೀಕ್ವೆ ನ್ಸಿಂಗ್‌ಗೆ) ಕ್ರಮವನ್ನು ಹೆಚ್ಚಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಮಂಗಳವಾರ ಸೂಚನೆ ನೀಡಿದೆ.

ಈ ಕುರಿತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಇಂತಹ ಕ್ರಮವು ದೇಶದಲ್ಲಿ ಪ್ರಸಾರವಾಗುತ್ತಿರುವ ಕೊರೊನಾವೈರಸ್ ಹೊಸ ರೂಪಾಂತರಗಳನ್ನು ಸಮಯೋಚಿತವಾಗಿ ಪತ್ತೆಹಚ್ಚಲು ಅನುವು ಮಾಡಿಕೊಡುತ್ತದೆ ಮತ್ತು ಅಗತ್ಯ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com