ಘಟನಾವಳಿಗಳನ್ನು ಅರ್ಥಮಾಡಿಕೊಳ್ಳಿ: ಪ್ರಧಾನ ಮಂತ್ರಿ ಮೋದಿಯವರ ಕೋವಿಡ್ ಸಭೆಗೆ ಕಾಂಗ್ರೆಸ್ ವ್ಯಂಗ್ಯ

ಭಾರತ್ ಜೋಡೋ ಯಾತ್ರೆ ದೆಹಲಿಗೆ ಪ್ರವೇಶಿಸುವ ಕೆಲವೇ ದಿನಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ವೈರಸ್ ಸಂಬಂಧಿತ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಕೋವಿಡ್ ಹರಡುವ ಕುರಿತು ಆರೋಗ್ಯ ಸಚಿವರು ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ. ಘಟನಾವಳಿಗಳನ್ನು ಅರ್ಥಮಾಡಿಕೊಳ್ಳಿ ಎಂದು ಕುಟುಕಿದೆ.
ಜೈರಾಂ ರಮೇಶ್
ಜೈರಾಂ ರಮೇಶ್

ನವದೆಹಲಿ: ಭಾರತ್ ಜೋಡೋ ಯಾತ್ರೆ ದೆಹಲಿಗೆ ಪ್ರವೇಶಿಸುವ ಕೆಲವೇ ದಿನಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ವೈರಸ್ ಸಂಬಂಧಿತ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಕೋವಿಡ್ ಹರಡುವ ಕುರಿತು ಆರೋಗ್ಯ ಸಚಿವರು ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ. ಘಟನಾವಳಿಗಳನ್ನು ಅರ್ಥಮಾಡಿಕೊಳ್ಳಿ ಎಂದು ಕುಟುಕಿದೆ.

ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಮಹಾಮಾರಿ ಮತ್ತೆ ವಕ್ಕರಿಸಿದೆ. ಈ ನಿಟ್ಟಿನಲ್ಲಿ ದೇಶದಲ್ಲಿ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ಚರ್ಚೆ ನಡೆಸಲು ಇಂದು ಮಧ್ಯಾಹ್ನ ಪ್ರಧಾನಿ ಮೋದಿಯವರು  ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಪ್ರಧಾನಿ ಮೋದಿ ಅವರು ದೇಶದಲ್ಲಿನ COVID-19 ಗೆ ಸಂಬಂಧಿಸಿದ ಪರಿಸ್ಥಿತಿಯನ್ನು ಪರಿಶೀಲಿಸಲು ಸಿದ್ಧವಾಗುವ ಕೆಲವೇ ಗಂಟೆಗಳ ಮೊದಲು ಕಾಂಗ್ರೆಸ್ ಸರ್ಕಾರವನ್ನು ಅಪಹಾಸ್ಯ ಮಾಡಿದೆ. 

ಜುಲೈ, ಸೆಪ್ಟೆಂಬರ್ ಮತ್ತು ನವೆಂಬರ್‌ನಲ್ಲಿ ಗುಜರಾತ್ ಮತ್ತು ಒಡಿಶಾದಲ್ಲಿ ಓಮಿಕ್ರಾನ್ ಉಪ ರೂಪಾಂತರಿ ಉಲ್ಬಣಗೊಂಡ 4 ಪ್ರಕರಣಗಳು ವರದಿಯಾಗಿದ್ದವು ಎಂದು ಕಾಂಗ್ರೆಸ್ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಉಸ್ತುವಾರಿ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಆರೋಗ್ಯ ಸಚಿವರು ನಿನ್ನೆ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಪ್ರಧಾನಿ ಇಂದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಭಾರತ್ ಜೋಡೋ ಯಾತ್ರೆ ನಾಡಿದ್ದು ದೆಹಲಿ ಪ್ರವೇಶಿಸುತ್ತಿದೆ. ಈ ಸಂದರ್ಭ, ಕಾಲವನ್ನು ಅರ್ಥಮಾಡಿಕೊಳ್ಳಿ ಎಂದು ಹೇಳುವ ಮೂಲಕ ಭಾರತ್ ಜೋಡೋ ಯಾತ್ರೆಗೆ ಅಡ್ಡಿಪಡಿಸಲು ಸರ್ಕಾರ ಬೇಕೆಂದೇ ಈ ರೀತಿ ಮಾಡುತ್ತಿದೆ ಎನ್ನುತ್ತಿದೆ. 

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾಗಿ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ತಾನ ದಾಟಿದೆ. ನಾಡಿದ್ದು ಡಿಸೆಂಬರ್ 24 ರಂದು ದೆಹಲಿಯನ್ನು ಪ್ರವೇಶಿಸುತ್ತದೆ. ಸುಮಾರು ಒಂಬತ್ತು ದಿನಗಳ ವಿರಾಮದ ನಂತರ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಅಂತಿಮವಾಗಿ, ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಯಾಣ ಬೆಳೆಸಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com