ನವದೆಹಲಿ: ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ನಟ ಕಮಲ್ ಹಾಸನ್ ಹೇಳಿದ್ದು ಹೀಗೆ...

ಕಾಂಗ್ರೆಸ್ ಕಾರ್ಯಕರ್ತರ ಅದ್ದೂರಿ ಸ್ವಾಗತದೊಂದಿಗೆ ಇಂದು ಬೆಳಗ್ಗೆ ರಾಷ್ಟ್ರ ರಾಜಧಾನಿಗೆ ತಲುಪಿದ ಭಾರತ್ ಜೋಡೋ ಯಾತ್ರೆ ಮೇಲೆ ಎಲ್ಲರ ಕಣ್ಣು ನೆಟ್ಟಿತ್ತು. ತಮಿಳಿನ ಖ್ಯಾತ ನಟ ಹಾಗೂ ಮಕ್ಕಳ್ ನಿಧಿ ಮೈಯಂ ಮುಖ್ಯಸ್ಥ ಕಮಲ್ ಹಾಸನ್ ಕೂಡಾ ಯಾತ್ರೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು. 
ರಾಹುಲ್ ಗಾಂಧಿ ಅವರೊಂದಿಗೆ ಕಮಲ್ ಹಾಸನ್
ರಾಹುಲ್ ಗಾಂಧಿ ಅವರೊಂದಿಗೆ ಕಮಲ್ ಹಾಸನ್

ನವದೆಹಲಿ: ಕಾಂಗ್ರೆಸ್ ಕಾರ್ಯಕರ್ತರ ಅದ್ದೂರಿ ಸ್ವಾಗತದೊಂದಿಗೆ ಇಂದು ಬೆಳಗ್ಗೆ ರಾಷ್ಟ್ರ ರಾಜಧಾನಿಗೆ ತಲುಪಿದ ಭಾರತ್ ಜೋಡೋ ಯಾತ್ರೆ ಮೇಲೆ ಎಲ್ಲರ ಕಣ್ಣು ನೆಟ್ಟಿತ್ತು. ತಮಿಳಿನ ಖ್ಯಾತ ನಟ ಹಾಗೂ ಮಕ್ಕಳ್ ನಿಧಿ ಮೈಯಂ ಮುಖ್ಯಸ್ಥ ಕಮಲ್ ಹಾಸನ್ ಕೂಡಾ ಯಾತ್ರೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು. 

ಈ ಸಂದರ್ಭದಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಕಮಲ್ ಹಾಸನ್, ಭಾರತೀಯನಾಗಿ ಇಲ್ಲಿರುವುದಾಗಿ ತಿಳಿಸಿದರು. ನಾನು ಇಲ್ಲಿ ಏಕೆ ಇರುವುದಾಗಿ ಅನೇಕ ಜನರು ಕೇಳುತ್ತಾರೆ. ಭಾರತೀಯನಾಗಿ ಇಲ್ಲಿರುವುದಾಗಿ ಕಮಲ್ ಹಾಸನ್ ಹೇಳಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ. 

ನನ್ನ ತಂದೆ ಕಾಂಗ್ರೆಸ್ಸಿಗರಾಗಿದ್ದರು, ನಾನು ವಿವಿಧ ಸಿದ್ಧಾಂತಗಳನ್ನು ಹೊಂದಿದ್ದೇನೆ ಮತ್ತು ನನ್ನದೇ ಆದ ರಾಜಕೀಯ ಪಕ್ಷವನ್ನು ಪ್ರಾರಂಭಿಸಿದ್ದೇನೆ ಆದರೆ ದೇಶದ ವಿಷಯಕ್ಕೆ ಬಂದಾಗ, ಎಲ್ಲಾ ರಾಜಕೀಯ ಪಕ್ಷದ ಮಾರ್ಗಗಳು ಮಸುಕಾಗಿದೆ. ಆ ಮಸುಕಾದ ಮಾರ್ಗದಿಂದಾಗಿ ನಾನು ಇಲ್ಲಿಗೆ ಬಂದಿದ್ದೇನೆ ಎಂದು ಅವರು ಹೇಳಿದರು.

ಹರಿಯಾಣದ ಪಾರಿಧಾಬಾದ್ ಕಡೆಯಿಂದ ಭಾರತ್ ಜೋಡೋ ಯಾತ್ರೆ ಶನಿವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿತು. ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಬರ್ಟ್ ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಯಾತ್ರೆಯಲ್ಲಿ ಪಾಲ್ಗೊಂಡರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com