ಥೇಣಿ(ತಮಿಳು ನಾಡು): ಶಬರಿಮಲೆಯಿಂದ ಭಕ್ತರು ವಾಪಸಾಗುತ್ತಿದ್ದ ವೇಳೆ ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟಿರುವ ಘಟನೆ ತಮಿಳು ನಾಡಿನ ಥೇಣಿ ಜಿಲ್ಲೆಯಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಕೆ ವಿ ಮುರಳೀಧರನ್ ತಿಳಿಸಿದ್ದಾರೆ. ಗಾಯಗೊಂಡ ಇಬ್ಬರನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಡ್ಡಗಾಡು ಮಾರ್ಗದ ತಿರುವಿನಲ್ಲಿ ವಾಹನ ಚಲಾಯಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಏಳು ಜನರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರಲ್ಲಿ ಅಪ್ರಾಪ್ತ ಬಾಲಕ ಸೇರಿದ್ದು, ಜಿಲ್ಲೆಯ ಆಂಡಿಪಟ್ಟಿ ನಿವಾಸಿಗಳು. ಇವರೆಲ್ಲರೂ ಶಬರಿಮಲೆಗೆ ಹೋಗಿ ವಾಪಸ್ಸಾಗುತ್ತಿದ್ದರು.
Advertisement