ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ
ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ

ಆಗ್ರಾ: ಚೀನಾದಿಂದ ವಾಪಸ್ಸಾದ ವ್ಯಕ್ತಿಗೆ ಕೋವಿಡ್ ಸೋಂಕು ದೃಢ

ಚೀನಾದಿಂದ 2 ದಿನಗಳ ಹಿಂದಷ್ಟೇ ವಾಪಸ್ಸಾಗಿದ್ದ 40 ವರ್ಷದ ವ್ಯಕ್ತಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಆಗ್ರಾದಲ್ಲಿ ಆತನನ್ನು ಐಸೊಲೇಷನ್ ಗೆ ಒಳಪಡಿಸಲಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಅರುಣ್ ಶ್ರೀವಾಸ್ತವ ಹೇಳಿದ್ದಾರೆ. 
Published on

ನವದೆಹಲಿ: ಚೀನಾದಿಂದ 2 ದಿನಗಳ ಹಿಂದಷ್ಟೇ ವಾಪಸ್ಸಾಗಿದ್ದ 40 ವರ್ಷದ ವ್ಯಕ್ತಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಆಗ್ರಾದಲ್ಲಿ ಆತನನ್ನು ಐಸೊಲೇಷನ್ ಗೆ ಒಳಪಡಿಸಲಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಅರುಣ್ ಶ್ರೀವಾಸ್ತವ ಹೇಳಿದ್ದಾರೆ. 

ಚೀನಾದಿಂದ ಬಂದ ವ್ಯಕ್ತಿಯ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಗಾಗಿ ಲಖನೌ ಗೆ ಕಳಿಸಲಾಗುತ್ತದೆ. ಆತನ ಕುಟುಂಬ ಸದಸ್ಯರನ್ನೂ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ ಎಂದು ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ. 

ದೆಹಲಿ ಮೂಲಕ ಈ ವ್ಯಕ್ತಿ ಡಿ.23 ರಂದು ಚೀನಾದಿಂದ ಆಗ್ರಾಗೆ ಆಗಮಿಸಿದ್ದರು ಈ ಬೆನ್ನಲ್ಲೇ ಖಾಸಗಿ ಪ್ರಯೋಗಾಲಯದ ವರದಿಯಲ್ಲಿ ಆತನಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ನ.25 ರ ಬಳಿಕ ಜಿಲ್ಲೆಯಲ್ಲಿ ವರದಿಯಾಗಿರುವ ಮೊದಲ ಪ್ರಕರಣ ಇದಾಗಿದೆ. ಚೀನಾದಲ್ಲಿ ಮತ್ತೆ ಕೋವಿಡ್-19 ಪ್ರಕರಣಗಳು ತೀವ್ರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚೀನಾ ಸೇರಿದಂತೆ ಹಲವು ರಾಷ್ಟ್ರಗಳು ಕೋವಿಡ್ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುತ್ತಿವೆ.

ಚೀನಾ, ಜಪಾನ್, ದಕ್ಷಿಣ ಕೊರಿಯಾ, ಸಿಂಗಪೂರ್, ಥಾಯ್ಲ್ಯಾಂಡ್ ಗಳಿಂದ ಬರುವವರಿಗೆ ಆರ್ ಟಿ-ಪಿಸಿಆರ್ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದ್ದು, ಆಕ್ಸಿಜನ್ ಘಟಕಗಳು ಸೇರಿ ಅಗತ್ಯ ವೈದ್ಯಕೀಯ ಸೌಲಭ್ಯಗಳ ಸಿದ್ಧತೆಯನ್ನು ಖಾತ್ರಿಪಡಿಸಿಕೊಳ್ಳುವುದಕ್ಕೆ ಡಿ.27ರಂದು ಮಾಕ್ ಡ್ರಿಲ್ ನಡೆಸುವುದಕ್ಕೆ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com