ಭಾರತ್ ಜೋಡೋ ಯಾತ್ರೆ: ಭದ್ರತಾ ವ್ಯವಸ್ಥೆ ಬಗ್ಗೆ ಜಮ್ಮು-ಕಾಶ್ಮೀರ ಲೆ.ಗವರ್ನರ್ ಜೊತೆಗೆ ಕಾಂಗ್ರೆಸ್ ಮುಖಂಡರ ಚರ್ಚೆ

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಮುಂದಿನ ತಿಂಗಳು ಕೇಂದ್ರಾಡಳಿತ ಪ್ರದೇಶವನ್ನು ಪ್ರವೇಶಿಸಲಿದ್ದು, ಹಿರಿಯ ಕಾಂಗ್ರೆಸ್ ನಾಯಕರು ಸೋಮವಾರ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಭೇಟಿಯಾಗಿ, ಭದ್ರತಾ ವ್ಯವಸ್ಥೆ ಕುರಿತು ಚರ್ಚಿಸಿದರು.
ಭಾರತ್ ಜೋಡೋ ಯಾತ್ರೆ ಸಾಂದರ್ಭಿಕ ಚಿತ್ರ
ಭಾರತ್ ಜೋಡೋ ಯಾತ್ರೆ ಸಾಂದರ್ಭಿಕ ಚಿತ್ರ

ಶ್ರೀನಗರ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಮುಂದಿನ ತಿಂಗಳು ಕೇಂದ್ರಾಡಳಿತ ಪ್ರದೇಶವನ್ನು ಪ್ರವೇಶಿಸಲಿದ್ದು, ಹಿರಿಯ ಕಾಂಗ್ರೆಸ್ ನಾಯಕರು ಸೋಮವಾರ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಭೇಟಿಯಾಗಿ, ಭದ್ರತಾ ವ್ಯವಸ್ಥೆ ಕುರಿತು ಚರ್ಚಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಜಮ್ಮು ಮತ್ತು ಕಾಶ್ಮೀರದ ಎಐಸಿಸಿ ಉಸ್ತುವಾರಿ ರಜನಿ ಪಾಟೀಲ್ ಮತ್ತು ಪಕ್ಷದ ನಾಯಕರಾದ ವಿಕಾರ್ ರಸೂಲ್ ವಾನಿ ಮತ್ತು ಗುಲಾಮ್ ಅಹ್ಮದ್ ಮಿರ್ ಅವರು ಸಿನ್ಹಾ ಅವರನ್ನು ಭೇಟಿ ಮಾಡಿ, ಯಾತ್ರೆಗೆ ಆಡಳಿತದ ಸಹಕಾರವನ್ನು ಕೋರಿದರು.

ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ 10 ರಾಜ್ಯಗಳ ಮೂಲಕ ಇದುವರೆಗೆ 2,800 ಕಿಮೀ ಕ್ರಮಿಸಿರುವ  ಯಾತ್ರೆಗೆ  ಒಂಬತ್ತು ದಿನಗಳ ವಿರಾಮ ನೀಡಲಾಗಿದೆ. ಜನವರಿ 3 ರಂದು ಪುನರಾರಂಭವಾಗಲಿದೆ. ಜನವರಿ ಅಂತ್ಯದಲ್ಲಿ ಶ್ರೀನಗರದಲ್ಲಿ ಯಾತ್ರೆ ಕೊನೆಗೊಳ್ಳುವ ಸಾಧ್ಯತೆಯಿದೆ.

 ಭಾರತ್ ಜೋಡೋ ಯಾತ್ರೆ ಅಂತಿಮ  ಸ್ಥಳದತ್ತ ಸಾಗುತ್ತಿದ್ದು, ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಭದ್ರತಾ ವ್ಯವಸ್ಥೆ ಕುರಿತು ಚರ್ಚಿಸಲಾಯಿತು ಎಂದು ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com