ಮ್ಯಾನ್ಮಾರ್‌ನಿಂದ ದೆಹಲಿಗೆ ಆಗಮಿಸಿದ ನಾಲ್ವರಿಗೆ ಕೋವಿಡ್ ಪಾಸಿಟಿವ್

ಮ್ಯಾನ್ಮಾರ್‌ನಿಂದ ಸೋಮವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಾಲ್ವರು ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಅವರ ಕೋವಿಡ್ ಮಾದರಿಯನ್ನು ಜೀನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಗುತ್ತಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮ್ಯಾನ್ಮಾರ್‌ನಿಂದ ಸೋಮವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಾಲ್ವರು ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಅವರ ಕೋವಿಡ್ ಮಾದರಿಯನ್ನು ಜೀನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಗುತ್ತಿದೆ ಎಂದು ಮೂಲಗಳು ತಿಳಿಸಿವೆ.

"ದೆಹಲಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್‌ನಿಂದ ಆಗಮಿಸಿದ  690 ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ ನಾಲ್ವರಿಗೆ ಪಾಸಿಟಿವ್ ಬಂದಿದೆ. ಸೋಂಕಿತ ವ್ಯಕ್ತಿಗಳನ್ನು ದೆಹಲಿಯ ಡಾ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ(ಆರ್‌ಎಂಎಲ್) ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಕಳುಹಿಸಲಾಗಿದೆ".

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿದ ಮಾರ್ಗಸೂಚಿ ಪ್ರಕಾರ ನಾಗರಿಕ ವಿಮಾನಯಾನ ಸಚಿವಾಲಯ, ದೆಹಲಿ ವಿಮಾನ ನಿಲ್ದಾಣದಲ್ಲಿಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಪ್ರಾರಂಭಿಸಿದೆ ಎಂದು ಜೆನೆಸ್ಟ್ರಿಂಗ್ಸ್ ಡಯಾಗ್ನೋಸ್ಟಿಕ್ ಸೆಂಟರ್ ಸಂಸ್ಥಾಪಕ ಡಾ.ಗೌರಿ ಅಗರ್ವಾಲ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com