ಹೊಸ ವರ್ಷಾಚರಣೆ ಹಿನ್ನೆಲೆ: ದೆಹಲಿಯಲ್ಲಿ ಬಿಗಿ ಭದ್ರತೆ, 18,000 ಪೊಲೀಸರ ನಿಯೋಜನೆ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಗಾಗಿ ಸುಮಾರು 18,000ಕ್ಕೂ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು  ದೆಹಲಿ ಪೊಲೀಸರು ಗುರುವಾರ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಗಾಗಿ ಸುಮಾರು 18,000ಕ್ಕೂ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು  ದೆಹಲಿ ಪೊಲೀಸರು ಗುರುವಾರ ಹೇಳಿದ್ದಾರೆ.

 ಹೊಸ ವರ್ಷಾಚರಣೆ ದೃಷ್ಟಿಯಿಂದ ಸುಮಾರು 16,500 ಸ್ಥಳೀಯ ಪೊಲೀಸರು ಸೇರಿದಂತೆ ಹೊರಗಿನ 20ಕ್ಕೂ ಹೆಚ್ಚು ತುಕಡಿಗಳನ್ನು ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ನಿಯೋಜಿಸಲಾಗುವುದು ಎಂದು ವಿಶೇಷ ಪೊಲೀಸ್ ಆಯುಕ್ತ ದೇಪೇಂದ್ರ ಪಾಠಕ್ ಹೇಳಿದ್ದಾರೆ.

ಈ ಬಾರಿ ಹೆಚ್ಚಿನ ಜನಸಂದಣಿ ಪ್ರದೇಶಗಳಲ್ಲಿ ಉಗ್ರ ನಿಗ್ರ ಕ್ರಮ ಕೈಗೊಳ್ಳಲಾಗುವುದು, ಅಂತಹ ಕಡೆಗಳಲ್ಲಿ ಸ್ಥಳೀಯ ಪೊಲೀಸರು ವಿಶೇಷ ಪಡೆಗಳೊಂದಿಗೆ ಸಮನ್ವಯತೆ ಸಾಧಿಸುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. 

ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಗಮನ ಹರಿಸಲಾಗಿದ್ದು, ನಗರದಲ್ಲಿ 2,500 ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಪಾಠಕ್ ಹೇಳಿದರು. 1,600ಕ್ಕೂ ಹೆಚ್ಚು ತಪಾಸಣಾ ಕೇಂದ್ರಗಳು, ಸುಮಾರು 1,200 ಸಂಚಾರಿ ಗಸ್ತು ವಾಹನಗಳು ಮತ್ತು 2,074 ಬೈಕ್ ಗಳನ್ನು ನಿಯೋಜಿಸಲಾಗುವುದು ಎಂದು ಅವರು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com