ಭಾರತ್ ಜೋಡೋ ಯಾತ್ರೆಗೆ ಆಹ್ವಾನವಿಲ್ಲ: ಅಖಿಲೇಶ್ ಯಾದವ್

ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ಹೋಲಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಉತ್ತರ ಪ್ರದೇಶದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಗೆ ಯಾವುದೇ ಆಹ್ವಾನವನ್ನು ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ.
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
Updated on: 

ಲಖನೌ: ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ಹೋಲಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಉತ್ತರ ಪ್ರದೇಶದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಗೆ ಯಾವುದೇ ಆಹ್ವಾನವನ್ನು ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಮ್ಮ ಭಾವನೆಗಳು ಅವರ ಯಾತ್ರೆಯೊಂದಿಗೆ ಇವೆ (ಆದರೆ) ನನಗೆ ಅದಕ್ಕೆ ಯಾವುದೇ ಆಹ್ವಾನ ಬಂದಿಲ್ಲ ಎಂದು ಹೇಳಿದರು.  ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಖಿಲೇಶ್, ನಮ್ಮ ಪಕ್ಷದ ಸಿದ್ಧಾಂತ ವಿಭಿನ್ನವಾಗಿದ್ದರೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಂದೇ ಎಂದರು.

ಚಳಿಯಿಂದಾಗಿ ಪ್ರಸ್ತುತ ವಿರಾಮದಲ್ಲಿರುವ ಭಾರತ್ ಜೋಡೋ ಯಾತ್ರೆ ಜನವರಿ 3 ರಿಂದ ದೆಹಲಿಯಿಂದ ಪುನರ್ ಆರಂಭವಾಗಲಿದ್ದು, ಉತ್ತರ ಪ್ರದೇಶ ಮೂಲಕ ಸಾಗಲಿದೆ. ಅಖಿಲೇಶ್ ಯಾದವ್, ಮಾಯಾವತಿ, ಜಯಂತ್ ಚೌಧರಿ ಸೇರಿದಂತೆ ಹಲವು  ಪಕ್ಷಗಳ ಮುಖಂಡರನ್ನು ಯಾತ್ರೆಯಲ್ಲಿ ಸೇರಲು ಆಹ್ವಾನ ನೀಡಿರುವುದಾಗಿ ಕಾಂಗ್ರೆಸ್ ಹೇಳಿತ್ತು.

ಯಾದವ್ ಪೂರ್ವ ನಿರ್ಧರಿತ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದರಿಂದ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿಲ್ಲ ಎಂದು ಎಸ್ ಪಿ ವಕ್ತಾರ ರಾಜೇಂದ್ರ ಚೌಧರಿ ಈ ಹಿಂದೆ ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com