ಚೀನಾ ಸೇರಿ ಕೆಲವು ದೇಶಗಳಲ್ಲಿ ಕೋವಿಡ್ ಉಲ್ಭಣ: ಕೇಂದ್ರ ಸರ್ಕಾರಕ್ಕೆ ಸೀರಮ್ ಇನ್‌ಸ್ಟಿಟ್ಯೂಟ್ ನಿಂದ 2 ಕೋಟಿ ಡೋಸ್ ಉಚಿತ ಕೋವಿಶೀಲ್ಡ್ ಪೂರೈಕೆ

ಚೀನಾ, ಜಪಾನ್, ಅಮೆರಿಕ ಸೇರದಂತೆ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಮುಂಜಾಗ್ರತಾ ಕ್ರಮವಾಗಿ ಎರಡು ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಕೇಂದ್ರ ಸರ್ಕಾರಕ್ಕೆ ಉಚಿತವಾಗಿ ನೀಡುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 
ಕೋವಿಶೀಲ್ಡ್
ಕೋವಿಶೀಲ್ಡ್

ನವದೆಹಲಿ: ಚೀನಾ, ಜಪಾನ್, ಅಮೆರಿಕ ಸೇರದಂತೆ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಮುಂಜಾಗ್ರತಾ ಕ್ರಮವಾಗಿ ಎರಡು ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಕೇಂದ್ರ ಸರ್ಕಾರಕ್ಕೆ ಉಚಿತವಾಗಿ ನೀಡುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 

ಅಧಿಕೃತ ಮೂಲಗಳ ಪ್ರಕಾರ, ಸೀರಮ್ ಇನ್‌ಸ್ಟಿಟ್ಯೂಟ್‌ನ ಸರ್ಕಾರಿ ಮತ್ತು ನಿಯಂತ್ರಕ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು 410 ಕೋಟಿ ರೂಪಾಯಿ ಮೌಲ್ಯದ ಡೋಸ್‌ಗಳನ್ನು ಉಚಿತವಾಗಿ ನೀಡುವುದಾಗಿ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ವಿತರಣೆಯನ್ನು ಹೇಗೆ ಮಾಡಬಹುದು ಎಂದು ಸಚಿವಾಲಯದಿಂದ ಕೇಳಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮಕ್ಕಾಗಿ SII ಇದುವರೆಗೆ 170 ಕೋಟಿಗೂ ಹೆಚ್ಚು ಕೋವಿಶೀಲ್ಡ್‌ಗಳನ್ನು ಸರ್ಕಾರಕ್ಕೆ ಒದಗಿಸಿದೆ.

ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಕೆಲವು ದೇಶಗಳಲ್ಲಿ COVID-19 ಪ್ರಕರಣಗಳ ಹೆಚ್ಚಳದ ಮಧ್ಯೆ, ಸರ್ಕಾರವು ಜನತೆಗೆ ಹಲವು ಎಚ್ಚರಿಕೆ ಸಂದೇಶಗಳನ್ನು ನೀಡಿದೆ. ಯಾವುದೇ ಘಟನೆಗೆ ಸಿದ್ಧರಾಗುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿದೆ.

ಭಾರತವು ತನ್ನ ಕಣ್ಗಾವಲು ಮತ್ತು ಕೋವಿಡ್ ಪಾಸಿಟಿವ್ ಸ್ಯಾಂಪಲ್‌ಗಳ ಜೀನೋಮ್ ಸೀಕ್ವೆನ್ಸಿಂಗ್ ನ್ನು ನೋಡುತ್ತಿದೆ. ಅರ್ಹ ವಯಸ್ಕ ಜನಸಂಖ್ಯೆಯ ಶೇಕಡಾ 27ರಷ್ಟು ಮಂದಿ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಂಡಿದ್ದಾರೆ.

ಜನವರಿಯಲ್ಲಿ ಭಾರತದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಮುಂದಿನ 40 ದಿನಗಳು ನಿರ್ಣಾಯಕ ಎಂದು ಅಧಿಕೃತ ಮೂಲಗಳು ಎಚ್ಚರಿಕೆ ನೀಡಿವೆ. ಅಲೆ ಎದ್ದರೂ ಸಾವು ಮತ್ತು ಆಸ್ಪತ್ರೆಗೆ ದಾಖಲಾದವರ ಸಂಖ್ಯೆ ತೀರಾ ಕಡಿಮೆ ಇರುತ್ತದೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

ಕಳೆದ ಶನಿವಾರದಿಂದ ಪ್ರತಿ ಅಂತಾರಾಷ್ಟ್ರೀಯ ವಿಮಾನದಲ್ಲಿ ಬರುವ ಶೇಕಡಾ ಎರಡರಷ್ಟು ಪ್ರಯಾಣಿಕರಿಗೆ ಯಾದೃಚ್ಛಿಕ ಕರೋನವೈರಸ್ ಪರೀಕ್ಷೆಯನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಪ್ರಕರಣಗಳ ಹೊಸ ಉಲ್ಬಣವನ್ನು ಎದುರಿಸಲು ದೇಶದ ಸನ್ನದ್ಧತೆಯನ್ನು ನಿರ್ಣಯಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸಭೆ ನಡೆಸಿದ್ದಾರೆ.

COVID-19 ಸೋಂಕಿನ ಯಾವುದೇ ಉಲ್ಬಣವನ್ನು ಎದುರಿಸಲು ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಲು ಮಂಗಳವಾರ ಭಾರತದಾದ್ಯಂತ ಆರೋಗ್ಯ ಸೌಲಭ್ಯಗಳಲ್ಲಿ ಅಣಕು ಕಾರ್ಯಾಚರಣೆಗಳನ್ನು ನಡೆಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com