ಕಳಸಾ ಬಂಡೂರಿ- ಗೋವಾ ಸಿಎಂ ಪ್ರಮೋದ್ ಸಾವಂತ್
ದೇಶ
ಮಹದಾಯಿ ನದಿ ನೀರಿಗಾಗಿ ಹೋರಾಟ ಮುಂದುವರಿಕೆ- ಗೋವಾ ಸಿಎಂ ಪ್ರಮೋದ್ ಸಾವಂತ್
ಕಳಸಾ- ಬಂಡೂರಿ ನಾಲಾ ಯೋಜನೆಯ ವಿಸ್ತೃತಾ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ ಬೆನ್ನಲ್ಲೇ, ಮಹದಾಯಿ ನದಿ ನೀರಿಗಾಗಿ ಹೋರಾಟ ಮುಂದುವರಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಪಣಜಿ: ಕಳಸಾ- ಬಂಡೂರಿ ನಾಲಾ ಯೋಜನೆಯ ವಿಸ್ತೃತಾ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ ಬೆನ್ನಲ್ಲೇ, ಮಹದಾಯಿ ನದಿ ನೀರಿಗಾಗಿ ಹೋರಾಟ ಮುಂದುವರಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಡಿಪಿಆರ್ ಅನುಮೋದನೆ ಹೊರತಾಗಿಯೂ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಕರ್ನಾಟಕ ಕಳಸಾ ನದಿ ನೀರನ್ನು ತಿರುಗಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ. ಕೂಡಲೇ ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರ ಸಲ್ಲಿಸಿದ ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಕೇಂದ್ರ ಜಲ ಆಯೋಗ ಅನುಮತಿ
ಈ ಮಧ್ಯೆ ಬಿಜೆಪಿ ಆಡಳಿತವಿರುವ ಕರ್ನಾಟಕದ ಪರವಾಗಿ ಪ್ರಮೋದ್ ಸಾವಂತ್ ರಾಜ್ಯದ ಹಿತಾಸಕ್ತಿಯನ್ನು ಬಿಟ್ಟುಕೊಟ್ಟಿದ್ದಾರೆ ಎಂದು ಅಲ್ಲಿನ ಪ್ರತಿಪಕ್ಷಗಳು ಆರೋಪಿಸಿವೆ.

