ಗಾಂಧಿನಗರದಲ್ಲಿ ಹೀರಾಬೆನ್‌ ಅಂತ್ಯಕ್ರಿಯೆ: ತಾಯಿಯ ಪಾರ್ಥೀವ ಶರೀರಕ್ಕೆ ಹೆಗಲು ಕೊಟ್ಟ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರ ಅಂತ್ಯಕ್ರಿಯೆ ಇದೇ ನಡೆಯಲಿದ್ದು, ಅಹ್ಮದಾಬಾದ್ ತಲುಪಿರುವ ಪ್ರಧಾನಿ ಮೋದಿಯವರು ತಾಯಿಯ ಪಾರ್ಥೀವ ಶರೀರವನ್ನು ಹೆಗಲ ಮೇಲೆ ಹೊತ್ತು ಅಂತಿಮ ಯಾತ್ರೆಯಲ್ಲಿ ಸಾಗಿದರು.
ತಾಯಿಯ ಪಾರ್ಥೀವ ಶರೀರಕ್ಕೆ ಹೆಗಲು ಕೊಟ್ಟು ನಡೆದ ಪ್ರಧಾನಿ ಮೋದಿ
ತಾಯಿಯ ಪಾರ್ಥೀವ ಶರೀರಕ್ಕೆ ಹೆಗಲು ಕೊಟ್ಟು ನಡೆದ ಪ್ರಧಾನಿ ಮೋದಿ

ಅಹ್ಮದಾಬಾದ್:  ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರ ಅಂತ್ಯಕ್ರಿಯೆ ಇದೇ ನಡೆಯಲಿದ್ದು, ಅಹ್ಮದಾಬಾದ್ ತಲುಪಿರುವ ಪ್ರಧಾನಿ ಮೋದಿಯವರು ತಾಯಿಯ ಪಾರ್ಥೀವ ಶರೀರವನ್ನು ಹೆಗಲ ಮೇಲೆ ಹೊತ್ತು ಅಂತಿಮ ಯಾತ್ರೆಯಲ್ಲಿ ಸಾಗಿದರು.

ಮೋದಿಯವರ ಸಹೋದರ ಪ್ರಹ್ಲಾದ್ ಮೋದಿಯವರ ಮನೆಯಿಂದ ಹೀರಾಬೆನ್ ಅವರ ಅಂತಿಮ ಯಾತ್ರೆ ಸಾಗಿದ್ದು, ಈ ವೇಳೆ ತಾಯಿಯ ಪಾರ್ಥೀವ ಶರೀರಕ್ಕೆ ಹೆಗಲುಕೊಟ್ಟು ಸಾಗಿದರು.

ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ಅಹ್ಮದಾಬಾದ್'ಗೆ ತಲುಪಿದರು. ನಂತರ ತಾಯಿಯ ಅಂತಿಮ ದರ್ಶನ ಪಡೆದ ಮೋದಿಯವರು, ಕಾಲಿಗೆ ನಮಸ್ಕರಿಸಿ ಪಾರ್ಥೀವ ಶರೀರಕ್ಕೆ ಹೆಗಲುಕೊಟ್ಟು ನಡೆದರು. ಹೀರಾಬೆನ್ ಅವರ ಅಂತಿಮ ಸಂಸ್ಕಾರ ಗಾಂಧಿನಗರದ ಸೆಕ್ಟರ್ 30ರ ರುದ್ರಭೂಮಿಯಲ್ಲಿ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com