2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ: ಕಮಲ್ ನಾಥ್

2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಶುಕ್ರವಾರ ಹೇಳಿದ್ದಾರೆ.
ಕಮಲ್ ನಾಥ್
ಕಮಲ್ ನಾಥ್

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಶುಕ್ರವಾರ ಹೇಳಿದ್ದಾರೆ.

ಪಿಟಿಐಗೆ ನೀಡಿದ ಇಮೇಲ್ ಸಂದರ್ಶನದಲ್ಲಿ, ದೇಶಾದ್ಯಂತ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸಿದ್ದಕ್ಕಾಗಿ ರಾಹುಲ್ ಗಾಂಧಿಯನ್ನು ಶ್ಲಾಘಿಸಿದರು. ಅವರು ಅಧಿಕಾರಕ್ಕಾಗಿ ರಾಜಕೀಯ ಮಾಡುತ್ತಿಲ್ಲ ಆದರೆ ದೇಶದ ಸಾಮಾನ್ಯ ಜನರಿಗಾಗಿ ಯಾತ್ರೆ ಮಾಡುತ್ತಿದ್ದಾರೆ ಎಂದು ಹೇಳಿದರು.

2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ, ರಾಹುಲ್ ಗಾಂಧಿ ಕೇವಲ ಪ್ರತಿಪಕ್ಷಗಳ ಮುಖವಾಗುವುದಿಲ್ಲ. ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯೂ ಆಗುತ್ತಾರೆ ಎಂದು ಕಮಲ್ ನಾಥ್ ತಿಳಿಸಿದ್ದಾರೆ.

ಜಗತ್ತಿನ ಇತಿಹಾಸದಲ್ಲಿ ಯಾರೂ ಇಷ್ಟು ಸುದೀರ್ಘ ‘ಪಾದಯಾತ್ರೆ(ಭಾರತ್ ಜೋಡೋ ಯಾತ್ರೆ)’ ಕೈಗೊಂಡಿಲ್ಲ ಎಂದು ಕಮಲ್ ನಾಥ್ ಹೇಳಿದ್ದಾರೆ.

ಗಾಂಧಿ ಕುಟುಂಬ ಹೊರತುಪಡಿಸಿ ಬೇರೆ ಯಾವ ಕುಟುಂಬವೂ ದೇಶಕ್ಕಾಗಿ ಇಷ್ಟೊಂದು ತ್ಯಾಗ ಬಲಿದಾನ ಮಾಡಿಲ್ಲ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com