ಉಪೇಂದ್ರ ಕುಶ್ವಾಹ
ಉಪೇಂದ್ರ ಕುಶ್ವಾಹ

ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹೇಳಿಕೆ: ಸಚಿವ ಈಶ್ವರಪ್ಪ ದೇಶದ್ರೋಹಿ ಎಂದ ನಿತೀಶ್ ಕುಮಾರ್ ಆಪ್ತ

ಭವಿಷ್ಯದಲ್ಲಿ ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಾಡಲೂಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ ದೇಶದ್ರೋಹಿ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತ...
Published on

ಪಾಟ್ನಾ: ಭವಿಷ್ಯದಲ್ಲಿ ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಾಡಲೂಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ ದೇಶದ್ರೋಹಿ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತ, ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಅವರು ಶುಕ್ರವಾರ ಕಿಡಿಕಾರಿದ್ದಾರೆ.

"ಮೊದಲ ಸಾಮ್ರಾಟ್ ಅಶೋಕ್ ಅವರನ್ನು ಅವಮಾನಿಸಲಾಯಿತು. ಬಿಜೆಪಿ ಈಗ ತ್ರಿವರ್ಣ ಧ್ವಜದ ವಿರುದ್ಧ ಅಭಿಯಾನ ನಡೆಸುವಂತಿದೆ. ಭಾರತ ಇದನ್ನು ಹೇಗೆ ಸಹಿಸಿಕೊಳ್ಳುತ್ತದೆ?" ಎಂದು ಜೆಡಿಯು ಸಂಸದೀಯ ಮಂಡಳಿ ಅಧ್ಯಕ್ಷ ಉಪೇಂದ್ರ ಕುಶ್ವಾಹ ಅವರು ಮಿತ್ರ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟ್ಯಾಗ್ ಮಾಡಿ ಸಚಿವ ಈಶ್ವರಪ್ಪ ಅವರ ವಿರುದ್ಧ ತ್ವರಿತ ಕ್ರಮ ತೆಗೆದುಕೊಳ್ಳುವಂತೆ ಕುಶ್ವಾಹ ಒತ್ತಾಯಿಸಿದ್ದಾರೆ. ಅಲ್ಲದೆ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವರನ್ನು ದೇಶದ್ರೋಹಿ ಎಂದು ಕರೆದಿದ್ದಾರೆ.

ಭವಿಷ್ಯದಲ್ಲಿ ಅಂದರೆ 100 ಅಥವಾ 200 ಅಥವಾ 500 ವರ್ಷಗಳ ನಂತರ ಭಗವದ್‌ ಧ್ವಜ ರಾಷ್ಟ್ರ ಧ್ವಜವಾಗಬಹುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com