ಉದಯಪುರ ಟೈಲರ್ ಹತ್ಯೆ: ಸಂಚು ರೂಪಿಸಿದ್ದ ಮತ್ತಿಬ್ಬರು ಆರೋಪಿಗಳ ಬಂಧನ

ರಾಜಸ್ತಾನದ ಉದಯಪುರದಲ್ಲಿ ನಡೆದಿದ್ದ ಟೈಲರ್ ಕನ್ಹಯ್ಯ ಲಾಲ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಟೈಲರ್ ಹತ್ಯೆ ಆರೋಪಿಗಳು
ಟೈಲರ್ ಹತ್ಯೆ ಆರೋಪಿಗಳು

ಜೈಪುರ: ರಾಜಸ್ತಾನದ ಉದಯಪುರದಲ್ಲಿ ನಡೆದಿದ್ದ ಟೈಲರ್ ಕನ್ಹಯ್ಯ ಲಾಲ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚು ರೂಪಿಸಿದ ಆರೋಪ ಮೇರೆಗೆ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ರಾಜಸ್ಥಾನ ಪೊಲೀಸರು ಮಾಹಿತಿ ನೀಡಿದ್ದಾರೆ.  ಹತ್ಯೆ ಸಂಚು ಮತ್ತು  ಸಿದ್ದತೆಯಲ್ಲಿ ನೆರವು ಆರೋಪದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉದಯಪುರದ ಐ ಜಿ ಪಿ ಪ್ರಫುಲ್ಲ ಕುಮಾರ್ ಈ ಮಾಹಿತಿ ನೀಡಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹ್ಸಿನ್ ಮತ್ತು ಆಸಿಫ್ ಎಂದು ಗುರುತಿಸಲಾಗಿದೆ. ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಬೆಂಬಲದೊಂದಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಈ ಪ್ರಕರಣವನ್ನು ತನಿಖೆ ನಡೆಸುತ್ತಿದೆ.

ಇದೇ ವೇಳೆ ಈ ಹಿಂದೆ ಬಂಧಿಸಲಾದ ಇಬ್ಬರು ಆರೋಪಿಗಳು ಅಂದರೆ ರಿಯಾಜ್ ಅಖ್ತರಿ ಮತ್ತು ಘೌಸ್ ಮೊಹಮ್ಮದ್ ನನ್ನು ಅಜ್ಮೀರ್ ದಲ್ಲಿರುವ ಜೈಲ್ಲಿನಲ್ಲಿ ಇರಿಸಲಾಗಿದೆ. ಇನ್ನೊಂದೆಡೆ ರಾಜಸ್ತಾನದಲ್ಲಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು  32 ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com