ಆದಿತ್ಯ ಠಾಕ್ರೆ ವಿರುದ್ಧ ಕ್ರಮವಿಲ್ಲ: ಉದ್ಧವ್ ಪುತ್ರನೆಡೆಗೆ ಶಿಂಧೆ ಕ್ಯಾಂಪ್ ಮೃದು ಧೋರಣೆ

ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಬಳಿಕ ಸಿಎಂ ಏಕನಾಥ್ ಶಿಂಧೆ ಅವರ ಶಿವಸೇನೆ ಬಣ, ವಿಪ್ ಉಲ್ಲಂಘನೆ ಮಾಡಿದ್ದಕ್ಕಾಗಿ ಶಿವಸೇನೆಯ ಉದ್ಧವ್ ಠಾಕ್ರೆ ಬಣಕ್ಕೆ ನೊಟೀಸ್ ಜಾರಿಗೊಳಿಸಿದೆ. 
ಆದಿತ್ಯ ಠಾಕ್ರೆ
ಆದಿತ್ಯ ಠಾಕ್ರೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಬಳಿಕ ಸಿಎಂ ಏಕನಾಥ್ ಶಿಂಧೆ ಅವರ ಶಿವಸೇನೆ ಬಣ, ವಿಪ್ ಉಲ್ಲಂಘನೆ ಮಾಡಿದ್ದಕ್ಕಾಗಿ ಶಿವಸೇನೆಯ ಉದ್ಧವ್ ಠಾಕ್ರೆ ಬಣಕ್ಕೆ ನೊಟೀಸ್ ಜಾರಿಗೊಳಿಸಿದೆ. 

ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ ನೊಟೀಸ್ ನಲ್ಲಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಪುತ್ರನ ಹೆಸರನ್ನು ಕೈಬಿಡಲಾಗಿದೆ. ಇದಕ್ಕೆ ಕಾರಣವನ್ನೂ ಶಿಂಧೆ ಬಣ ನೀಡಿದ್ದು, ಗೌರವ ನೀಡಿ ಆದಿತ್ಯ ಠಾಕ್ರೆ ಅವರ ಹೆಸರನ್ನು ನೊಟೀಸ್ ನಿಂದ ಕೈಬಿಡಲಾಗಿದೆ ಎಂದು ಶಿಂಧೆ ಬೆಂಬಲಿಗ ಭರತ್ ಗೊಗವಾಲೆ ಹೇಳಿದ್ದಾರೆ.

ಉದ್ಧವ್ ಠಾಕ್ರೆ ಬಣದಲ್ಲಿರುವ ಶಾಸಕರೂ ಸೇರಿದಂತೆ ಶಿವಸೇನೆಯ ಎಲ್ಲಾ ಶಾಸಕರೂ ಉದ್ಧವ್ ಹಾಗೂ ಆದಿತ್ಯ ಠಾಕ್ರೆ ಅವರೊಂದಿಗೆ ಒಟ್ಟಿಗೆ ಕೆಲಸ ಮಾಡಿದ್ದೇವೆ, ನಾವು ಅವರಿಗೆ ಗೌರವ ನೀಡುತ್ತೇವೆ ಆದರೆ ಅವರು ನಮ್ಮ ಸಮಸ್ಯೆಗಳನ್ನು ನಿವಾರಿಸಬೇಕಿತ್ತು ಎಂದು ಭರತ್ ಗೊಗವಾಲೆ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com