ಖಾದ್ಯ ತೈಲ ದರದಲ್ಲಿ 15 ರೂ. ಕಡಿತಕ್ಕೆ ಕೇಂದ್ರ ಸರ್ಕಾರ ಆದೇಶ!

ಖಾದ್ಯ ತೈಲ ದರ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಅಲ್ಪ ಪ್ರಮಾಣದ ರಿಲೀಫ್ ನೀಡಿದ್ದು, ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಡುಗೆ ಎಣ್ಣೆಗಳ ದರದಲ್ಲಿ ಪ್ರತಿ ಲೀಟರ್​​​ಗೆ 15 ರೂಪಾಯಿ ಕಡಿತಗೊಳಿಸಿ ಆದೇಶ ಹೊರಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಖಾದ್ಯ ತೈಲ ದರ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಅಲ್ಪ ಪ್ರಮಾಣದ ರಿಲೀಫ್ ನೀಡಿದ್ದು, ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಡುಗೆ ಎಣ್ಣೆಗಳ ದರದಲ್ಲಿ ಪ್ರತಿ ಲೀಟರ್​​​ಗೆ 15 ರೂಪಾಯಿ ಕಡಿತಗೊಳಿಸಿ ಆದೇಶ ಹೊರಡಿಸಿದೆ.

ಈ ಕುರಿತಂತೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ನಿರ್ದೇಶನ ಹೊರಡಿಸಿದ್ದು, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಖಾದ್ಯ ತೈಲಗಳ ಗರಿಷ್ಠ ಚಿಲ್ಲರೆ ಬೆಲೆಯಲ್ಲಿ (MRP) 15 ರೂಪಾಯಿಗಳ ಕಡಿತವನ್ನು ಖಚಿತಪಡಿಸಿಕೊಳ್ಳಲು ಪ್ರಮುಖ ಖಾದ್ಯ ತೈಲ ಸಂಘಗಳಿಗೆ ನಿರ್ದೇಶನ ನೀಡಿದೆ ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಶುಕ್ರವಾರ ತಿಳಿಸಿದೆ.

ಅಂತೆಯೇ ಈ ಆದೇಶವು ಈ ಕ್ಷಣದಿಂದಲೇ ಜಾರಿಗೆ ಬರಬೇಕೆಂದು ಖಾದ್ಯ ತೈಲ ಸಂಘಗಳಿಗೆ ಸೂಚನೆ ನೀಡಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com