ಅಪಘಾತ ನಡೆದ ಸ್ಥಳದಲ್ಲಿ ಪೊಲೀಸರು ಮತ್ತು ಸಾರ್ವಜನಿಕರು
ದೇಶ
ಉತ್ತರ ಪ್ರದೇಶದಲ್ಲಿ ರಸ್ತೆ ಅಪಘಾತ: ಐವರು ಸಾವು, ಮೂವರಿಗೆ ಗಾಯ: ಸಿಎಂ ಯೋಗಿ ಆದಿತ್ಯನಾಥ್ ಪರಿಹಾರ ಘೋಷಣೆ
ಉತ್ತರ ಪ್ರದೇಶದ ಚಿತ್ರಕೂಟದ ಭರತ್‌ಕುಪ್ ಪೊಲೀಸ್ ಠಾಣೆ ವ್ಯಾಪ್ತಿಯ ರೌಲಿ ಕಲ್ಯಾಣಪುರ ಗ್ರಾಮದ ಬಳಿ ನಡೆದ ರಸ್ತೆ ಅಪಘಾತದಲ್ಲಿ 5 ಜನರು ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ.
ಚಿತ್ರಕೂಟ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಚಿತ್ರಕೂಟದ ಭರತ್‌ಕುಪ್ ಪೊಲೀಸ್ ಠಾಣೆ ವ್ಯಾಪ್ತಿಯ ರೌಲಿ ಕಲ್ಯಾಣಪುರ ಗ್ರಾಮದ ಬಳಿ ನಡೆದ ರಸ್ತೆ ಅಪಘಾತದಲ್ಲಿ 5 ಜನರು ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ.
ಗಾಯಗೊಂಡವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಚಿತ್ರಕೂಟ ಜಿಲ್ಲಾಧಿಕಾರಿ ಸಂಬ್ರಂತ್ ಶುಕ್ಲ ತಿಳಿಸಿದ್ದಾರೆ.
ಮೃತರ ಕುಟುಂಬಸ್ಥರಿಗೆ ಸಿಎಂ ಯೋಗಿ ಆದಿತ್ಯನಾಥ್ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಕುಟುಂಬಕ್ಕೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಪಿಕಪ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗಿದ್ದು ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ.

