ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಬಂಧನ ವಾರೆಂಟ್!
ಲಖಿಂಪುರ ಖೇರಿ: ಟ್ವೀಟ್ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಸುಪ್ರೀಂ ಕೋರ್ಟ್ ಐದು ದಿನಗಳ ಮಧ್ಯಂತರ ಜಾಮೀನು ನೀಡಿದ್ದು, ಲಖಿಂಪುರ ಖೇರಿ ನ್ಯಾಯಾಲಯವು ಜುಬೈರ್ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಿದೆ.
ಮೊಹಮ್ಮದ್ ಜುಬೇರ್‌ಗೆ ಸುಪ್ರೀಂ ಕೋರ್ಟ್ ಐದು ದಿನಗಳ ಮಧ್ಯಂತರ ಜಾಮೀನು ನೀಡಿದ ಕೆಲವೇ ಗಂಟೆಗಳ ನಂತರ, ಲಖಿಂಪುರ ಖೇರಿ ಪೊಲೀಸರು ಜುಬೈರ್ ವಿರುದ್ಧ ವಾರೆಂಟ್ ಹೊರಡಿಸಿದ್ದರು. ಕಳೆದ ವರ್ಷ ಎರಡು ಗುಂಪುಗಳ ನಡುವೆ ವೈಷಮ್ಯ ಬೆಳೆಸಿದ ಆರೋಪದ ಮೇಲೆ ಮೊಹಮ್ಮದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಹಿನ್ನೆಲೆ ಲಖಿಂಪುರ ಖೇರಿ ನ್ಯಾಯಾಲಯವು ಜುಲೈ 11 ರಂದು ಹಾಜರಾಗುವಂತೆ ಜುಬೈರ್ ಗೆ ಸಮನ್ಸ್ ನೀಡಿದೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಲಖಿಂಪುರ ಖೇರಿ ಪ್ರಕರಣವನ್ನು ದಾಖಲಿಸಲಾಗಿತ್ತು.
ಶುಕ್ರವಾರ, ಸ್ಥಳೀಯ ನ್ಯಾಯಾಲಯಕ್ಕೆ ತೆರಳಿದ ಲಖಿಂಪುರ ಖೇರಿ ಪೊಲೀಸರು, ಜುಬೇರ್ ವಿರುದ್ಧ ವಾರಂಟ್ ಪಡೆದು, ಜುಬೈರ್ ಇರುವ ಸೀತಾಪುರ ಜಿಲ್ಲಾ ಕಾರಾಗೃಹದಲ್ಲಿ ವಾರಂಟ್ ಸಲ್ಲಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ