
ಬೆಂಗಳೂರು: ರಾಷ್ಟ್ರದಾದ್ಯಂತ ಕಳೆದ 24 ಗಂಟೆಗಳಲ್ಲಿ 18, 257 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ನಿನ್ನೆಗೆ ಹೋಲಿಸಿದರೆ ಇಂದು ಸ್ವಲ್ಪ ಕಡಿಮೆಯಾಗಿದೆ.
14, 553 ಸೋಂಕಿತರು ಗುಣಮುಖರಾಗಿದ್ದು, 42 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸದ್ಯ 1,28,690 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ. 4.22 ರಷ್ಟಿದೆ. ದೇಶದಲ್ಲಿ ಇಲ್ಲಿಯವರೆಗೂ 198. 65 ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.
Advertisement