ಆವಂತಿಪೋರಾ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನೆ, ಕಾರ್ಯಾಚರಣೆ ಮುಂದುವರಿಕೆ!

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ನಡೆಯುತ್ತಿರುವ ಎನ್ಕೌಂಟರ್ ನಲ್ಲಿ ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಲಾಗಿದ್ದು, ಆ ಮೂಲಕ ಈ ಎನ್ಕೌಂಟರ್ ನಲ್ಲಿ ಹತರಾದ ಉಗ್ರರ ಸಂಖ್ಯೆ 2ಕ್ಕೇರಿದೆ.
ಸೇನಾ ಎನ್ ಕೌಂಟರ್
ಸೇನಾ ಎನ್ ಕೌಂಟರ್
Updated on: 

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ನಡೆಯುತ್ತಿರುವ ಎನ್ಕೌಂಟರ್ ನಲ್ಲಿ ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಲಾಗಿದ್ದು, ಆ ಮೂಲಕ ಈ ಎನ್ಕೌಂಟರ್ ನಲ್ಲಿ ಹತರಾದ ಉಗ್ರರ ಸಂಖ್ಯೆ 2ಕ್ಕೇರಿದೆ.

ಆವಂತಿಪೋರಾದ ವಂಡಕ್‌ಪೋರಾ ಪ್ರದೇಶದಲ್ಲಿ ಸೋಮವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದಿರುವುದಾಗಿ ಭದ್ರತಾ ಪಡೆಗಳೊಂದಿಗೆ ಪೊಲೀಸರು ಸೋಮವಾರ ಹೇಳಿದ್ದಾರೆ.

ಭಾನುವಾರದಿಂದ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ಸೋಮವಾರವೂ ಕೂಡ ಮುಂದುವರೆದಿದ್ದು, ಇಂದು ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ. ಆ ಮೂಲಕ ಈ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಘಟನಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ಮತ್ತಷ್ಟು ಉಗ್ರರು ಅವಿತಿರುವ ಶಂಕೆ ಇದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಪ್ರತ್ಯೇಕ ಹೇಳಿಕೆಯಲ್ಲಿ ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಅವರು ಕೂಡ ಈ ಬಗ್ಗೆ ಮಾಹಿತಿ ನೀಡಿದ್ದು, "ಜೆಇಎಂ ಭಯೋತ್ಪಾದಕ ಸಂಘಟನೆಯ ಕುಖ್ಯಾತ ಭಯೋತ್ಪಾದಕ ಕೈಸರ್ ಕೋಕಾ 2018 ರಿಂದ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿದ್ದ. ಹಾಲಿ ಎನ್‌ಕೌಂಟರ್‌ನಲ್ಲಿ ಆತ ಸಿಕ್ಕಿಬಿದ್ದಿದ್ದಾನೆ" ಎಂದು ಹೇಳಿದ್ದಾರೆ. 

ಉಗ್ರರ ಇರುವಿಕೆ ಸುಳಿವಿನ ಮೇರೆಗೆ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದ ನಂತರ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com