

ಮುಂಬೈ: ಮಹಾರಾಷ್ಟ್ರದ ಬಿಜೆಪಿ ನಾಯಕ ಶ್ರೀಕಾಂತ್ ದೇಶ್ ಮುಖ್ ಮಹಿಳೆಯೊಂದಿಗಿರುವ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ನಾಯಕನನ್ನು ವಜಾಗೊಳಿಸಿದೆ.
ಶ್ರೀಕಾಂತ್ ದೇಶ್ ಮುಖ್ ಸೋಲಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿದ್ದು, ಶ್ರೀಕಾಂತ್ ದೇಶ್ ಮುಖ್ ಅವರಿಗೆ ಸಂಬಂಧಿಸಿದ ವೀಡಿಯೋ ವೈರಲ್ ಆಗಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಶ್ರೀಕಾಂತ್ ದೇಶ್ ಮುಖ್ ಅವರನ್ನು ಹುದ್ದೆಗಳಿಂದ ವಜಾಗೊಳಿಸಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷರಾದ ಚಿತ್ರ ವಾಘ್ ಹೇಳಿದ್ದಾರೆ.
ವೀಡಿಯೋದಲ್ಲಿರುವ ಮಹಿಳೆ ಮುಂದೆ ಬಂದು ಪೊಲೀಸ್ ದೂರು ನೀಡಬೇಕೆಂದು ವಾಘ್ ತಿಳಿಸಿದ್ದಾರೆ.
ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಚಿತ್ರ ವಾಘ್ ಹೇಳಿದ್ದಾರೆ. ವೀಡಿಯೋದಲ್ಲಿರುವ ಮಹಿಳೆ ಪ್ರತಿಕ್ರಿಯೆ ನೀಡಿದ್ದು, ದೇಶ್ ಮುಖ್ ತಮ್ಮೊಂದಿಗೆ ಸಂಬಂಧ ಹೊಂದಿದ್ದರು. ಆದರೆ ಈಗ ಮೋಸ ಮಾಡಿದ್ದಾರೆ ಎಂದು ಹೇಳಿದ್ದಾರೆ.