ಸೋನಿಯಾ ಗಾಂಧಿ ಸಹ 2002ರ ಗುಜರಾತ್‌ ಗಲಭೆ ಪ್ರಕರಣದ ಪಿತೂರಿಯ ಭಾಗ: ಬಿಜೆಪಿ

2002ರಲ್ಲಿ ಗುಜರಾತ್‌ನಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಸಿಲುಕಿಸುವ ಷಡ್ಯಂತ್ರದ ಹಿಂದೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು “ಪ್ರೇರಕ ಶಕ್ತಿ” ಇದೆ ಎಂದು ಬಿಜೆಪಿ ಶನಿವಾರ...
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ಮುಂಬೈ: 2002ರಲ್ಲಿ ಗುಜರಾತ್‌ನಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಸಿಲುಕಿಸುವ ಷಡ್ಯಂತ್ರದ ಹಿಂದೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು “ಪ್ರೇರಕ ಶಕ್ತಿ” ಇದೆ ಎಂದು ಬಿಜೆಪಿ ಶನಿವಾರ ಆರೋಪಿಸಿದೆ.

ಬಂಧಿತ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಗುಜರಾತ್ ಪೊಲೀಸರ ವಿಶೇಷ ತನಿಖಾ ತಂಡ(ಎಸ್‌ಐಟಿ) ವಿರೋಧಿಸಿದ ಒಂದು ದಿನದ ನಂತರ ಸೋನಿಯಾ ಗಾಂಧಿ ಅವರ ವಿರುದ್ಧ ಆಡಳಿತ ಪಕ್ಷ ತೀವ್ರ ವಾಗ್ದಾಳಿ ನಡೆಸಿದೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು, ಸೋನಿಯಾ ಗಾಂಧಿಯವರ ರಾಜಕೀಯ ಸಲಹೆಗಾರರಾಗಿದ್ದ ದಿವಂಗತ ಅಹ್ಮದ್ ಪಟೇಲ್ ಅವರು ರಾಜ್ಯದಲ್ಲಿನ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಮತ್ತು ಪ್ರಧಾನಿ ಮೋದಿಯವರ ರಾಜಕೀಯ ವೃತ್ತಿಜೀವನವನ್ನು ಹಾಳು ಮಾಡಲು ಹುನ್ನಾರ ನಡೆಸಿದ್ದರು ಎಂದು ಆರೋಪಿಸಿದ್ದಾರೆ.

ಸೋನಿಯಾ ಗಾಂಧಿ ಅವರು ಅಹ್ಮದ್ ಪಟೇಲ್ ರೂಪಿಸಿದ ದೊಡ್ಡ ಪಿತೂರಿಯ ಭಾಗವಾಗಿದ್ದಾರೆ ಎಂದು ಎಸ್ಐಟಿ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಹೇಳಿದೆ. 

ಪಟೇಲ್ ಅವರನ್ನು ಸಮರ್ಥಿಸಿಕೊಂಡ ಕಾಂಗ್ರೆಸ್, ಪಟೇಲ್ ವಿರುದ್ಧ ಹೊರಿಸಲಾದ ಆರೋಪಗಳು ಪ್ರಧಾನಿ ಮೋದಿಯವರು ಮುಖ್ಯಮಂತ್ರಿಯಾಗಿದ್ದಾಗ ಬಿಚ್ಚಿಟ್ಟ ಕೋಮು ಹತ್ಯಾಕಾಂಡದ ಯಾವುದೇ ಹೊಣೆಗಾರಿಕೆಯಿಂದ ತಮ್ಮನ್ನು ತಾವು ಮುಕ್ತಗೊಳಿಸುವ ವ್ಯವಸ್ಥಿತ ತಂತ್ರದ ಭಾಗವಾಗಿದೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com