'ಅಸಂಸದೀಯ'; ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು: ಕಾಂಗ್ರೆಸ್ ಆಕ್ರೋಶ

ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಕೇಂದ್ರ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರುಹಾಜರಾಗಿದ್ದಕ್ಕೆ ಕಾಂಗ್ರೆಸ್ ಭಾನುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅಸಂಸದೀಯ ಅಲ್ಲವೇ ಎಂದು ಕಿಡಿಕಾರಿದೆ.
ಸರ್ವ ಪಕ್ಷ ನಾಯಕರ ಸಭೆ
ಸರ್ವ ಪಕ್ಷ ನಾಯಕರ ಸಭೆ
Updated on

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಕೇಂದ್ರ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರುಹಾಜರಾಗಿದ್ದಕ್ಕೆ ಕಾಂಗ್ರೆಸ್ ಭಾನುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅಸಂಸದೀಯ ಅಲ್ಲವೇ ಎಂದು ಕಿಡಿಕಾರಿದೆ.

ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಭಾನುವಾರ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರುಹಾಜರಾಗಿದ್ದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಅವರು ಸಭೆಗೆ ಪ್ರಧಾನಿ ಗೈರುಹಾಜರಾಗಿರುವುದನ್ನು ಪ್ರಶ್ನಿಸಿದ್ದಾರೆ.

'ಮುಂಬರುವ ಸಂಸತ್ತಿನ ಅಧಿವೇಶನದ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಇದೀಗ ಆರಂಭವಾಗಿದ್ದು, ಎಂದಿನಂತೆ ಪ್ರಧಾನಿ ಗೈರುಹಾಜರಾಗಿದ್ದಾರೆ.. ಇದು ಅಸಂಸದೀಯವಲ್ಲವೇ’ ಎಂದು ರಮೇಶ್ ಪ್ರಶ್ನಿಸಿದರು.

ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಮತ್ತು ಜೈರಾಮ್ ರಮೇಶ್, ಡಿಎಂಕೆಯ ಟಿಆರ್ ಬಾಲು ಮತ್ತು ತಿರುಚಿ ಶಿವ, ಟಿಎಂಸಿಯ ಸುದೀಪ್ ಬಂಡೋಪಾಧ್ಯಾಯ ಮತ್ತು ಎನ್‌ಸಿಪಿಯ ಶರದ್ ಪವಾರ್ ಸೇರಿದಂತೆ ಬಹುತೇಕ ಎಲ್ಲಾ ಪಕ್ಷಗಳ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಬಿಜೆಡಿಯ ಪಿನಾಕಿ ಮಿಶ್ರಾ, ವೈಎಸ್‌ಆರ್‌ಸಿಪಿಯ ವಿಜಯಸಾಯಿ ರೆಡ್ಡಿ ಮತ್ತು ಮಿಥುನ್ ರೆಡ್ಡಿ, ಟಿಆರ್‌ಎಸ್‌ನ ಕೇಶವ ರಾವ್ ಮತ್ತು ನಾಮ ನಾಗೇಶ್ವರ್ ರಾವ್, ಆರ್‌ಜೆಡಿಯ ಎಡಿ ಸಿಂಗ್ ಮತ್ತು ಶಿವಸೇನೆಯ ಸಂಜಯ್ ರಾವುತ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.

ಆದರೆ, ಮಹತ್ವದ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೈರಾಗಿದ್ದರು. ಅಧಿವೇಶನ ಆರಂಭಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚಿಸಿ ಒಮ್ಮತ ಮೂಡಿಸುವುದು ವಾಡಿಕೆ. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 18 ರಂದು ಆರಂಭವಾಗಲಿದ್ದು, ಆಗಸ್ಟ್ 12 ರಂದು ಮುಕ್ತಾಯವಾಗಲಿದೆ. ಸಂಸತ್‌ ಅಧಿವೇಶನಕ್ಕೂ ಮುನ್ನ ಸುತ್ತೋಲೆಯೊಂದನ್ನು ಹೊರಡಿಸಿರುವ ಸರ್ಕಾರ, ಕೆಲ ಅಸಂಸದೀಯ ಪದಗಳನ್ನು ಬಳಸದಂತೆ ತಿಳಿಸಿದೆ.

ಮುಂಗಾರು ಅಧಿವೇಶನದಲ್ಲಿ ಕೈಗೊಳ್ಳಬೇಕಾದ ವಿಷಯಗಳ ಕುರಿತು ಚರ್ಚಿಸಲು ಮತ್ತು ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಸಹಕಾರ ಕೋರಲು ಸಂಸತ್ ಭವನದ ಅನುಬಂಧದಲ್ಲಿ ಸರ್ಕಾರ ಕರೆದಿದ್ದ ಸಭೆಯಲ್ಲಿ ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಜ್ಯಸಭೆಯಲ್ಲಿ ಸಭಾನಾಯಕ ಪಿಯೂಷ್ ಗೋಯಲ್ ಉಪಸ್ಥಿತರಿದ್ದರು.

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 18 ರಂದು ಆರಂಭವಾಗಲಿದ್ದು, ಆಗಸ್ಟ್ 12 ರಂದು ಮುಕ್ತಾಯವಾಗಲಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com