

ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 20, 528 ಹೊಸ ಪ್ರಕರಣ ಪತ್ತೆಯಾಗಿದೆ. 49 ಸೋಂಕಿತರು ಸಾವಿನೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 5,25,709ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 17,790 ಸೋಂಕಿತರು ಗುಣಮುಖರಾಗಿ ಮನೆಗೆ ವಾಪಸ್ಸಾಗಿದ್ದಾರೆ. ಇದರೊಂದಿಗೆ ಒಟ್ಟಾರೇ ಗುಣಮುಖರಾದವರ ಸಂಖ್ಯೆ 4,30,81,441ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ 2,689 ಪ್ರಕರಣಗಳು ಏರಿಕೆಯಾಗಿದ್ದು, ದೇಶದಲ್ಲಿ ಸದ್ಯ 1,43,449 ಸಕ್ರಿಯ ಪ್ರಕರಣಗಳಿವೆ.
ರಾಷ್ಟ್ರೀಯ ಕೋವಿಡ್-19 ಚೇತರಿಕೆ ಪ್ರಮಾಣ ಶೇ. 98.47 ರಷ್ಟಿದ್ದು, ಮರಣ ಪ್ರಮಾಣ ಶೇ. 1.20 ರಷ್ಟು ದಾಖಲಾಗಿದೆ. ದೇಶಾದ್ಯಂತ ಒಟ್ಟಾರೇ 2 ಬಿಲಿಯನ್ ಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ.