ದೆಹಲಿ: ಮೂವರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದು ಪೊಲೀಸರಿಗೆ ಶರಣಾದ ಪೊಲೀಸ್!

ದೆಹಲಿಯಲ್ಲಿ ನಿಯೋಜನೆಗೊಂಡಿದ್ದ ಸಿಕ್ಕಿಂ ಪೊಲೀಸ್ ಸಿಬ್ಬಂದಿಯೊಬ್ಬರು ಸೋಮವಾರ ತನ್ನ ಮೂವರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ದೆಹಲಿಯಲ್ಲಿ ನಿಯೋಜನೆಗೊಂಡಿದ್ದ ಸಿಕ್ಕಿಂ ಪೊಲೀಸ್ ಸಿಬ್ಬಂದಿಯೊಬ್ಬರು ಸೋಮವಾರ ತನ್ನ ಮೂವರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ದೆಹಲಿಯ ಹೈದರ್‌ಪುರ ಪ್ರದೇಶದ ವಾಟರ್ ಪ್ಲಾಂಟ್‌ನಲ್ಲಿ ಈ ಘಟನೆ ನಡೆದಿದೆ. ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ ಆರೋಪಿಯನ್ನು 32 ವರ್ಷದ ಪ್ರಬಿಣ್ ರೈ ಎಂದು ಗುರುತಿಸಲಾಗಿದೆ. ಗುಂಡಿನ ದಾಳಿಯ ಬಳಿಕ ಪ್ರಬಿಣ್ ರೈ ಪೊಲೀಸರಿಗೆ ಶರಣಾಗಿದ್ದಾರೆ.

ವಾಟರ್ ಪ್ಲಾಂಟ್‌ನಲ್ಲಿ ನಿಯೋಜನೆಗೊಂಡಿದ್ದ ರೈ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟರೆ, ಮೂರನೇ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ದಾಳಿ ಬಳಿಕ ರೈ ಪೊಲೀಸರಿಗೆ ಕರೆ ಮಾಡಿ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಘಟನೆಗೆ ಕಾರಣ ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಇದೇ  ರೀತಿಯ ಎರಡು ಪ್ರಮುಖ ಹತ್ಯೆಯ ಘಟನೆಗಳು ನಡೆದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್(ಐಟಿಬಿಪಿ) ಯೋಧನೊಬ್ಬ ತನ್ನ ಮೂವರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಶನಿವಾರ ನಡೆದಿತ್ತು.

ಮತ್ತೊಂದು ಘಟನೆಯಲ್ಲಿ, ಪೂಂಚ್‌ನಲ್ಲಿ ಇಬ್ಬರು ಸೇನಾ ಯೋಧರು ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com