ನೂಪುರ್ ಶರ್ಮಾಗೆ ಬಿಗ್ ರಿಲೀಫ್: ಬಂಧನದಿಂದ ಸುಪ್ರೀಂ ರಕ್ಷಣೆ

ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಸುಪ್ರೀಂ ಕೋರ್ಟ್‌ನಿಂದ ರಿಲೀಫ್ ಪಡೆದಿದ್ದಾರೆ. ಬಂಧನದಿಂದ ರಕ್ಷಣೆ ಕೋರಿ ನೂಪುರ್ ಶರ್ಮಾ...
ನೂಪುರ್ ಶರ್ಮಾ
ನೂಪುರ್ ಶರ್ಮಾ

ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಸುಪ್ರೀಂ ಕೋರ್ಟ್‌ನಿಂದ ರಿಲೀಫ್ ಪಡೆದಿದ್ದಾರೆ. ಬಂಧನದಿಂದ ರಕ್ಷಣೆ ಕೋರಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಆಗಸ್ಟ್ 10ರ ವರೆಗೆ ಬಂಧಿಸದಂತೆ ಆದೇಶಿಸಿದೆ.

ನೂಪುರ್‌ ಶರ್ಮಾ ಅವರಿಗೆ ಕೊಲೆ ಬೆದರಿಕೆಗಳು ಬರುತ್ತಿದ್ದು, ಆಕೆಗೆ ಬಂಧನದಿಂದ ತಡೆಯಾಜ್ಞೆ ಹಾಗೂ ರಕ್ಷಣೆ ನೀಡಬೇಕು ಎಂದು ವಕೀಲರು ನ್ಯಾಯಾಲಯದಲ್ಲಿ ವಾದಿಸಿದರು.

ಈ ಹಿನ್ನೆಲೆಯಲ್ಲಿ ಆಗಸ್ಟ್ 10ರವರೆಗೆ ನೂಪುರ್ ಅವರನ್ನು ಬಂಧಿಸದಂತೆ ನ್ಯಾಯಾಲಯ ಸೂಚಿಸಿದೆ. ಇದರೊಂದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೂ ಈ ಸಂಬಂಧ ನೋಟಿಸ್ ಜಾರಿ ಮಾಡಲಾಗಿದೆ. ಆಕೆಯ (ನೂಪುರ್) ಜೀವಕ್ಕೆ ಗಂಭೀರ ಬೆದರಿಕೆ ಇದೆ ಎಂದು ನೂಪುರ್ ಶರ್ಮಾ ಪರ ವಾದ ಮಂಡಿಸಿದ ವಕೀಲ ಮಣಿಂದರ್ ಸಿಂಗ್ ಹೇಳಿದರು. ಆದೇಶವನ್ನು ಉಚ್ಚರಿಸುವಾಗ, ಪೀಠವು, ಅರ್ಜಿದಾರರ ಹತ್ಯೆಯ ಬಗ್ಗೆ ಸಲ್ಮಾನ್ ಚಿಶ್ತಿಯ ವೈರಲ್ ಹೇಳಿಕೆಯನ್ನು ಸಹ ಗಮನಕ್ಕೆ ತೆಗೆದುಕೊಂಡಿತು. ಯುಪಿಯ ವ್ಯಕ್ತಿಯೊಬ್ಬರು ಅರ್ಜಿದಾರರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿರುವುದನ್ನು ನ್ಯಾಯಾಲಯವು ಆಲಿಸಿತು.

ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆ ನೀಡಿದ ಶರ್ಮಾ ವಿರುದ್ಧ ದೆಹಲಿ, ಮಹಾರಾಷ್ಟ್ರ, ತೆಲಂಗಾಣ, ಪಶ್ಚಿಮ ಬಂಗಾಳ, ಕರ್ನಾಟಕ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಅಸ್ಸಾಂನಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಜುಲೈ 1ರಂದು ಸುಪ್ರೀಂ ಕಠಿಣ ನಿಲುವು
ಈ ಹಿಂದೆ ಜುಲೈ 1 ರಂದು ಸುಪ್ರೀಂ ಕೋರ್ಟ್‌ನಲ್ಲಿ ನೂಪುರ್ ಅವರ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಕಠಿಣ ನಿಲುವು ತೆಗೆದುಕೊಂಡಿತ್ತು. ಇದುವರೆಗೆ ನೂಪುರ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಅವರ ಹೇಳಿಕೆಯಿಂದ ದೇಶದಲ್ಲಿ ಆತಂಕದ ವಾತಾವರಣಕ್ಕೆ ಕಾರಣವಾಗಿದೆ ಎಂದು ಕೋರ್ಟ್ ಕಟು ಟೀಕೆ ಮಾಡಿತ್ತು. ಟಿವಿಯಲ್ಲಿ ಬಂದು ಕ್ಷಮೆ ಯಾಚಿಸುವಂತೆಯೂ ನೂಪುರ್ ಗೆ ಕೋರ್ಟ್ ಹೇಳಿತ್ತು. ನೂಪುರ್ ಅವರು ಅಪಾಯದಲ್ಲಿದ್ದಾರೆಯೇ ಅಥವಾ ಅವರ ಹೇಳಿಕೆಯಿಂದ ದೇಶಕ್ಕೆ ಅಪಾಯವಿದೆಯೇ ಎಂದು ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com