ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ನವದೆಹಲಿಯಲ್ಲಿ ಆರಂಭವಾಗಿದ್ದು, ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಮೊದಲ ಸುತ್ತಿನಲ್ಲೇ ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗಿಂತ ಮುನ್ನಡೆ ಸಾಧಿಸಿದ್ದಾರೆ.
ನಿರೀಕ್ಷೆಯಂತೆ, ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ 3.78 ಲಕ್ಷ ಮತಗಳನ್ನು ಗಳಿಸಿದರೆ, ಪ್ರತಿಸ್ಪರ್ಧಿ ಯಶವಂತ್ ಸಿನ್ಹಾ ಅವರು 1.45 ಲಕ್ಷ ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ. ಒಟ್ಟು 15 ಮತಗಳು ಅಸಿಂಧುವಾಗಿವೆ.
ಇಂದು ಬೆಳಗ್ಗೆ 11 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸಂಜೆಯವರೆಗೂ ಮುಂದುವರಿಯುವ ಸಾಧ್ಯತೆ ಇದೆ.
ಸಂಭ್ರಮಾಚರಣೆ
ಮೊದಲ ಸುತ್ತಿನ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಮುನ್ನಡೆ ಸಾಧಿಸುತ್ತಿದ್ದಂತೆ, ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಪತಿ ಶ್ಯಾಮ್ ಚರಣ್ ಮುರ್ಮು ನಿಧನದ ನಂತರ ಪತಿ ಹಾಗೂ ಇಬ್ಬರು ಪುತ್ರರ ಸ್ಮರಣಾರ್ಥ ಸ್ಥಾಪಿಸಿದ ಪಹಾದ್‌ಪುರದ ಎಸ್‌ಎಲ್‌ಎಸ್ ಸ್ಮಾರಕ ವಸತಿ ಶಾಲೆಯಲ್ಲಿ ಸಂಭ್ರಮಾಚರಣೆ ಪ್ರಾರಂಭವಾಗಿದೆ. ಮುರ್ಮು ಅವರು 4 ವರ್ಷಗಳ ಅವಧಿಯಲ್ಲಿ ಪತಿ ಮತ್ತು ಇಬ್ಬರು ಪುತ್ರರನ್ನು ಕಳೆದುಕೊಂಡಿದ್ದರು.
Advertisement