ಉಪರಾಷ್ಟ್ರಪತಿ ಚುನಾವಣೆಗೂ ಮುನ್ನ ವಿಪಕ್ಷ ಅಭ್ಯರ್ಥಿಗೆ ಹಿನ್ನಡೆ: ಮತದಾನದಿಂದ ಟಿಎಂಸಿ ದೂರ

ಆಗಸ್ಟ್ 6ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಟಿಎಂಸಿ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿದೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಆಗಸ್ಟ್ 6ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಟಿಎಂಸಿ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿದೆ.

ಮಾರ್ಗರೆಟ್ ಆಳ್ವ ಅವರ ಹೆಸರನ್ನು ಅಂತಿಮಗೊಳಿಸುವ ಮುನ್ನ ಯಾರೂ ನಮ್ಮನ್ನು ಸಂಪರ್ಕಿಸಲಿಲ್ಲ. ಆಳ್ವಾ ಅವರ ಹೆಸರನ್ನು ನಿರ್ಧರಿಸಿದ ನಂತರ ವಿರೋಧ ಪಕ್ಷದ ಹಿರಿಯ ನಾಯಕರೊಬ್ಬರು ನಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರು. ಆದ್ದರಿಂದ, ನಾವು ಉಪರಾಷ್ಟ್ರಪತಿ ಚುನಾವಣೆಗೆ ಮತದಾನ ಪ್ರಕ್ರಿಯೆಯಿಂದ ದೂರವಿರಲು ನಿರ್ಧರಿಸಿದ್ದೇವೆ ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಐದು ದಿನಗಳ ಹಿಂದೆ, ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಜಗದೀಪ್ ಧಂಖರ್ ಅವರ ಹೆಸರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಎನ್‌ಡಿಎ ಮೈತ್ರಿಕೂಟ ಘೋಷಿಸಿತು.

ಟಿಎಂಸಿ ವರಿಷ್ಠೆ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನಾಳೆ ಮಧ್ಯಾಹ್ನ ತಮ್ಮ ಕಾಳಿಘಾಟ್ ನಿವಾಸದಲ್ಲಿ ಉಪರಾಷ್ಟ್ರಪತಿ ಚುನಾವಣೆಯ ವಿಷಯದ ಬಗ್ಗೆ ಪಕ್ಷದ ನಿಲುವು ನಿರ್ಧರಿಸಲು ಸಭೆ ಕರೆದಿದ್ದಾರೆ.

ಇಂದಿನ ಸಭೆಯಲ್ಲಿ ನಮ್ಮ ಸಂಸದರ ಜತೆ ಚರ್ಚಿಸಿ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯುವ ನಿರ್ಧಾರ ಕೈಗೊಂಡಿದ್ದೇವೆ. ಚರ್ಚೆಯ ವೇಳೆ ಶೇ.85ರಷ್ಟು ಸಂಸದರು ಉಪರಾಷ್ಟ್ರಪತಿ ಚುನಾವಣೆಗೆ ಮತದಾನ ಪ್ರಕ್ರಿಯೆಯಿಂದ ದೂರವಿರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ಬ್ಯಾನರ್ಜಿ ಹೇಳಿದರು.

ಇದೇ ವೇಳೆ, ಟಿಎಂಸಿ ಎನ್‌ಡಿಎ ಅಭ್ಯರ್ಥಿ ಧಂಖರ್ ಅವರನ್ನು ಏಕೆ ಬೆಂಬಲಿಸುವುದಿಲ್ಲ ಎಂದು ಅಭಿಷೇಕ್ ವಿವರಿಸಿದರು. ಧಂಖರ್ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದರು. 2019ರಿಂದ ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರಾಗಿದ್ದ ಅವಧಿಯಲ್ಲಿ ಅವರು ರಾಜ್ಯದ ಇಮೇಜ್ ಅನ್ನು ಹೇಗೆ ಹಾಳುಮಾಡಿದರು ಎಂಬುದನ್ನು ಬಂಗಾಳದ ಜನರು ಮರೆತಿಲ್ಲ. ನಾವು ಎನ್‌ಡಿಎಯನ್ನು ಬೆಂಬಲಿಸುವುದಿಲ್ಲ ಎಂಬುದು ಸರ್ವಾನುಮತದ ನಿರ್ಧಾರವಾಗಿದೆ. ಅಭ್ಯರ್ಥಿ ಮತ್ತು ಮತದಾನ ಪ್ರಕ್ರಿಯೆಯಿಂದ ದೂರವಿರುವುದಾಗಿ ಎಂದು ಬ್ಯಾನರ್ಜಿ ಹೇಳಿದರು.

ನಾಲ್ಕು ದಿನಗಳ ಹಿಂದೆ ಆಳ್ವ ಅವರ ಹೆಸರನ್ನು ಘೋಷಿಸಿದ ನಂತರ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದು ಆದರೆ ಅವರು ಸಮ್ಮೇಳನದಲ್ಲಿ ನಿರತರಾಗಿದ್ದರಿಂದ ಅದು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com