ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿ ಠಾಣೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದ ಟ್ರಾಫಿಕ್ ಪೊಲೀಸ್!

ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಶನಿವಾರ ಟ್ರಾಫಿಕ್ ಪೊಲೀಸ್‌ ಅಧಿಕಾರಿಯೊಬ್ಬರು 45 ಲಕ್ಷ ಇರುವ ಬ್ಯಾಗನ್ನು ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆಯನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದ್ದಾರೆ.
ಹಣದೊಂದಿಗೆ ಪೊಲೀಸ್ ಪೇದೆ
ಹಣದೊಂದಿಗೆ ಪೊಲೀಸ್ ಪೇದೆ
Updated on

ರಾಯಪುರ : ಛತ್ತೀಸ್​ಗಢದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ರಸ್ತೆಯಲ್ಲಿ ನಡೆದುಕೊಂಡ ಹೋಗುತ್ತಿದ್ದ ವೇಳೆ 45 ಲಕ್ಷ ರೂಪಾಯಿ ಉಳ್ಳ ಬ್ಯಾಗ್ ಸಿಕ್ಕಿದೆ. ಈ ಬ್ಯಾಗ್ ಅನ್ನು ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಯೊಬ್ಬರು, ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಶನಿವಾರ ಟ್ರಾಫಿಕ್ ಪೊಲೀಸ್‌ ಅಧಿಕಾರಿಯೊಬ್ಬರು 45 ಲಕ್ಷ ಇರುವ ಬ್ಯಾಗನ್ನು ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆಯನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಖನಂದನ್ ರಾಥೋರ್ ಮಾತನಾಡಿ, ನವ ರಾಯ್‌ಪುರದ ಕಯಾಬಂಧ ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಟ್ರಾಫಿಕ್ ಕಾನ್‌ಸ್ಟೆಬಲ್ ನಿಲಂಬರ್ ಸಿನ್ಹಾ ಅವರು ಬೆಳಿಗ್ಗೆ ಮಾನಾ ಪೊಲೀಸ್ ಠಾಣಾ ವ್ಯಾಪ್ತಿಯ ರಸ್ತೆಯೊಂದರಲ್ಲಿ ಬ್ಯಾಗ್ ಅನ್ನು ಕಂಡುಕೊಂಡಿದ್ದಾರೆ.

ಬ್ಯಾಗ್ ಪರಿಶೀಲಿಸಿದಾಗ ಅದರೊಳಗೆ 2000 ಮತ್ತು 500 ರೂ. ನೋಟುಗಳ ಕಂತೆ ಕಂಡುಬಂದಿದೆ. ಈ ಬ್ಯಾಗ್​ನಲ್ಲಿ ಒಟ್ಟು 45 ಲಕ್ಷ ರೂಪಾಯಿ ಪತ್ತೆಯಾಗಿದ್ದು, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಿವಿಲ್ ಲೈನ್ಸ್ ಠಾಣೆಗೆ ಬ್ಯಾಗ್ ಅನ್ನು ಹಸ್ತಾಂತರಿಸಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com