ಬಾರಾಮುಲ್ಲಾದಲ್ಲಿ ಮತ್ತೆ ಸೇನಾ ಎನ್‌ಕೌಂಟರ್: ಓರ್ವ ಭಯೋತ್ಪಾದಕ ಹತ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬಿನ್ನರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಇ ತೊಯ್ಬಾದ (ಎಲ್ಇಟಿ) ಭಯೋತ್ಪಾದಕ ಹತನಾಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on: 

ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬಿನ್ನರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಇ ತೊಯ್ಬಾದ (ಎಲ್ಇಟಿ) ಭಯೋತ್ಪಾದಕ ಹತನಾಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಹತ್ಯೆಗೀಡಾದ ಉಗ್ರನನ್ನು ಇರ್ಷಾದ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಎಲ್ಇಟಿಯೊಂದಿಗೆ ಸಂಪರ್ಕ ಹೊಂದಿದ್ದ ಈತ ಮೇ 2022 ರಿಂದ ಉಗ್ರ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ಎನ್ನಲಾಗಿದೆ.

ಪೊಲೀಸರು ಆತನಿಂದ ಒಂದು ಎಕೆ ರೈಫಲ್, ಎರಡು ಮ್ಯಾಗಜೀನ್‌ಗಳು ಮತ್ತು 30 ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಶನಿವಾರ ತಡರಾತ್ರಿ ಈ ಎನ್‌ಕೌಂಟರ್‌ ನಡೆದಿದೆ.

ಇದಕ್ಕೂ ಮುನ್ನ, ಶನಿವಾರ ಮುಂಜಾನೆಯಷ್ಟೇ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಾರಾಮುಲ್ಲಾದ ವಾನಿಗಮ್ ಬಾಲಾ ಗ್ರಾಮದಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ್ದರು.

ಈ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಒಂದು ಶ್ವಾನವೂ ಕೂಡ ಪ್ರಾಣ ಕಳೆದುಕೊಂಡಿದ್ದು, ಭದ್ರತಾ ಪಡೆಗಳ ಮೂವರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇನ್ನೊಂದೆಡೆ, ಎಲ್ಇಟಿಯ ಇಬ್ಬರು ಹೈಬ್ರಿಡ್ ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com