ಪ್ರವಾದಿ ಕುರಿತು ಹೇಳಿಕೆ: ಬಿಜೆಪಿ ಮಾಡಿದ ಪಾಪಕ್ಕೆ ಜನರೇಕೆ ಸಂಕಷ್ಟ ಅನುಭವಿಸಬೇಕು?: ಮಮತಾ ಬ್ಯಾನರ್ಜಿ

ಹೌರಾ ಜಿಲ್ಲೆಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆ ಹಿಂದೆ ಕೆಲವು ರಾಜಕೀಯ ಪಕ್ಷಗಳ ಕೈವಾಡವಿದ್ದು, ರಾಜ್ಯದಲ್ಲಿ ಗಲಭೆಗಳನ್ನು ಪ್ರಚೋದಿಸಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಭರವಸೆ ನೀಡಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
Updated on

ಕೋಲ್ಕತ್ತಾ: ಹೌರಾ ಜಿಲ್ಲೆಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆ ಹಿಂದೆ ಕೆಲವು ರಾಜಕೀಯ ಪಕ್ಷಗಳ ಕೈವಾಡವಿದ್ದು, ರಾಜ್ಯದಲ್ಲಿ ಗಲಭೆಗಳನ್ನು ಪ್ರಚೋದಿಸಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಭರವಸೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಕಳೆದ ಎರಡು ದಿನಗಳಿಂದ ಹೌರಾದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಇದರ ಹಿಂದೆ ಕೆಲವು ರಾಜಕೀಯ ಪಕ್ಷಗಳಿವೆ ಮತ್ತು ಅವರು ಗಲಭೆಯನ್ನು ಬಯಸುತ್ತಾರೆ. ಆದರೆ, ಈ ಬೆಳವಣಿಗೆಯನ್ನು ನಾನು ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ಮಾಡಿದ ಪಾಪಕ್ಕೆ ಜನರೇಕೆ ಸಂಕಷ್ಟ ಅನುಭವಿಸಬೇಕೆಂದು ಮಮತಾ ಬ್ಯಾನರ್ಜಿಯವರು ಪ್ರಶ್ನಿಸಿದ್ದಾರೆ.

ಪ್ರವಾದಿ ಮೊಹಮ್ಮದ್ ವಿರುದ್ಧ ಬಿಜೆಪಿ ನಾಯಕರ ಅವಹೇಳನಕಾರಿ ಹೇಳಿಕೆ ಖಂಡಿಸಿ ದೇಶದಾದ್ಯಂತ ಮುಸ್ಲಿಂ ಸಮುದಾಯಗಳು ತೀವ್ರ ಪ್ರತಿಭಟನೆಗಳನ್ನು ನಡೆಸುತ್ತಿದ್ದು, ಈ ಪ್ರತಿಭಟನೆಗಳು ಕೆಲವೆಡೆ ಹಿಂಸಾಚಾರಕ್ಕೆ ತಿರುಗಿದೆ. ಜಾರ್ಖಾಂಡ್'ನ ರಾಂಚಿಯಲ್ಲಿ ಹಿಂಸಾತ್ಮಕ ಪ್ರತಿಭಟನೆಯು ಇಬ್ಬರ ಜೀವವನ್ನು ಬಲಿಪಡೆದುಕೊಂಡಿದೆ. ಇನ್ನು ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿಯೂ ಕೂಡ ಹಿಂಸಾತ್ಮಕ ರೀತಿಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ಕೆಲವೆಗೆ ಕಲ್ಲು ತೂರಾಟಗಳು ನಡೆಸಲಾಗಿದ್ದು, ವಾಹನಗಳಿಗೆ ಬೆಂಕಿಹಚ್ಚಲಾಗಿದೆ. ಜಿಲ್ಲೆಯಲ್ಲಿ ಪ್ರತಿಭಟನಾಕಾರರು ರಸ್ತೆ ಹಾಗು ರೈಲು ಹಳಿಗಳನ್ನು ತಡೆಹಿಡಿದ್ದರಿಂದಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಂಸಾಚಾರ ಹಿನ್ನೆಲೆಯಲ್ಲಿ ಹಲವಾರು ಸ್ಥಳೀಯ ಹಾಗೂ ಎಕ್ಸ್'ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಪರಿಸ್ಥಿತಿ ಕೈಮೀರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜೂ.13ರವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ಉಲುಬೇರಿಯಾ, ಡೊಮ್ಜೂರ್ ಮತ್ತು ಪಂಚ್ಲಾದಂತಹ ಹಲವಾರು ಪ್ರದೇಶಗಳಲ್ಲಿ ಸಿಆರ್'ಪಿಎಸ್ ಸೆಕ್ಷನ್ 144 ರ ಅಡಿಯಲ್ಲಿ ಜೂನ್ 15ರವರೆಗೆ ನಿಷೇಧಾಜ್ಞೆಗಳನ್ನು ಜಾರಿಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com