ಜಮ್ಮು: ಗಡಿಯಲ್ಲಿ ಶಸ್ತ್ರಸಜ್ಜಿತ ನಸುಳುಕೋರರು, ಬಿಎಸ್ ಎಫ್ ನಡುವೆ ಗುಂಡಿನ ಕಾಳಗ

ಶಸ್ತ್ರ ಸಜ್ಜಿತ ನಸುಳುಕೋರರು ಹಾಗೂ ಗಡಿ ಭದ್ರತಾ ಪಡೆ ಸಿಬ್ಬಂದಿ ನಡುವೆ ಗುಂಡಿನ ಕಾಳಗ ನಡೆದಿದ್ದು, ಅಂತಾರಾಷ್ಟ್ರೀಯ ಗಡಿ ಮೂಲಕ ದೇಶದೊಳಗೆ ನುಸುಳುವ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ವಕ್ತಾರರೊಬ್ಬರು ಸೋಮವಾರ ತಿಳಿಸಿದ್ದಾರೆ.
ಗಡಿ ಭದ್ರತಾ ಪಡೆ ಸಿಬ್ಬಂದಿ
ಗಡಿ ಭದ್ರತಾ ಪಡೆ ಸಿಬ್ಬಂದಿ
Updated on

ಜಮ್ಮು: ಶಸ್ತ್ರ ಸಜ್ಜಿತ ನಸುಳುಕೋರರು ಹಾಗೂ ಗಡಿ ಭದ್ರತಾ ಪಡೆ ಸಿಬ್ಬಂದಿ ನಡುವೆ ಗುಂಡಿನ ಕಾಳಗ ನಡೆದಿದ್ದು, ಅಂತಾರಾಷ್ಟ್ರೀಯ ಗಡಿ ಮೂಲಕ ದೇಶದೊಳಗೆ ನುಸುಳುವ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ವಕ್ತಾರರೊಬ್ಬರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ರಾತ್ರಿ ಸುಮಾರು 9-30ರ ವೇಳೆಯಲ್ಲಿ ಅರ್ನಿಯಾ ಸೆಕ್ಟೆರ್ ನಲ್ಲಿ ಈ ಘಟನೆ ನಡೆದಿದೆ.  ಅಂತಾರಾಷ್ಟ್ರೀಯ ಗಡಿಯಲ್ಲಿ ನುಸುಳುಕೋರರ ಚಲನವಲನವನ್ನು ಗಮನಿಸಿದ ಬಿಎಸ್ ಎಫ್ ಯೋಧರು, ಆಲರ್ಟ್ ಆದಾಗ ಗುಂಡಿನ ಚಕಮಕಿ ನಡೆದಿರುವುದಾಗಿ ವಕ್ತಾರರು ಹೇಳಿದ್ದಾರೆ.

ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳ ಮೇಲೆ  ಬಿಎಸ್‌ಎಫ್ ಪಡೆಗಳು ಪ್ರತಿಯಾಗಿ ಗುಂಡಿನ ದಾಳಿ ನಡೆಸಿದಾಗ ನುಸುಳುಕೋರರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಸೋಮವಾರ ಬೆಳಿಗ್ಗೆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು ಆದರೆ ಏನನ್ನೂ ವಶಕ್ಕೆ ಪಡೆಯಲಾಗಲಿಲ್ಲ ಎಂದು ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com