ಗುಜರಾತ್ ನಲ್ಲಿ ಭಾರೀ ಮಳೆ: ಮನೆ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ಸಾವು, ಸಿಡಿಲಿಗೆ ಒಬ್ಬ ಬಲಿ
ಮೊರ್ಬಿ: ಗುಜರಾತ್ ನಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ರಾತ್ರಿ ಮೊರ್ಬಿ ಜಿಲ್ಲೆಯ ಹಲ್ವಾದ್ ತಾಲೂಕಿನ ಸುಂದರಿ ಭವಾನಿ ಗ್ರಾಮದಲ್ಲಿ ನಡೆದಿದೆ.
ರಾತ್ರಿ ವೇಳೆ ಮಲಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮನೆ ಗೋಡೆ ಕುಸಿದು ಗಂಡ, ಹೆಂಡತಿ, ಸಹೋದರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಕ್ಷಣವೇ ಕೆಲವು ಗ್ರಾಮಸ್ಥರು ಪೊಲೀಸರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೋರ್ಬಿಯ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಮತ್ತೊಂದು ಘಟನೆಯಲ್ಲಿ, ಜಿಲ್ಲೆಯ ಜಿಕಿಯಾರಿ ಗ್ರಾಮದಲ್ಲಿ ಭಾನುವಾರ ಸಂಜೆ ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಇನ್ನೊಬ್ಬ ಅಧಿಕಾರಿ ತಿಳಿಸಿದ್ದಾರೆ.
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ(ಎಸ್‌ಇಒಸಿ) ಪ್ರಕಾರ ಸೋಮವಾರ ಬೆಳಗ್ಗೆ 6 ಗಂಟೆಗಯವರೆಗೆ ಮಳೆಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ ಗುಜರಾತ್‌ನ 91 ತಾಲೂಕುಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಭಾರೀ ಮಳೆಯಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ