ನೂಪುರ್ ಶರ್ಮಾ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಟಿವಿ ಪತ್ರಕರ್ತೆ ನವಿಕಾ ಕುಮಾರ್ ಹೆಸರೂ ಇದೆ: ಪೊಲೀಸರು

ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ(ಬಿಜೆಪಿ) ವಕ್ತಾರೆ ನೂಪುರ್ ಶರ್ಮಾ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಹಿರಿಯ ಟಿವಿ ಪತ್ರಕರ್ತ ನವಿಕಾ ಕುಮಾರ್ ಅವರ ಹೆಸರೂ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರತಿಭಟನೆ ಚಿತ್ರ
ಪ್ರತಿಭಟನೆ ಚಿತ್ರ

ಮುಂಬೈ: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ(ಬಿಜೆಪಿ) ವಕ್ತಾರೆ ನೂಪುರ್ ಶರ್ಮಾ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಹಿರಿಯ ಟಿವಿ ಪತ್ರಕರ್ತ ನವಿಕಾ ಕುಮಾರ್ ಅವರ ಹೆಸರೂ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

'ಟೈಮ್ಸ್ ನೌ' ಸುದ್ದಿ ವಾಹಿನಿಯಲ್ಲಿ ನವಿಕಾ ಕುಮಾರ್ ಅವರ ಕಾರ್ಯಕ್ರಮವೊಂದರಲ್ಲಿ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಧರ್ಮಗುರುಗಳ ದೂರಿನ ಮೇರೆಗೆ ಶರ್ಮಾ ಮತ್ತು ಕುಮಾರ್ ವಿರುದ್ಧ ಸೋಮವಾರ ನಾನಲ್ ಪೇತ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಟೈಮ್ಸ್ ನೌ' ಪ್ರಸಾರ ಮಾಡಿದ 'ಪ್ರೈಮ್ ಟೈಮ್' ಕಾರ್ಯಕ್ರಮದಲ್ಲಿ ಶರ್ಮಾ ಅವರು ಪ್ರವಾದಿಯವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಮತ್ತು ಕಾರ್ಯಕ್ರಮವನ್ನು ಕುಮಾರ್ ಆಯೋಜಿಸಿದ್ದರು.

ಪೊಲೀಸ್ ಅಧಿಕಾರಿಯೊಬ್ಬರು ಟೈಮ್ಸ್ ನೌ ನಿರೂಪಕರಾದ ನವಿಕಾ ಕುಮಾರ್ ಮತ್ತು ನೂಪುರ್ ಶರ್ಮಾ ವಿರುದ್ಧ ಭಾರತೀಯ ದಂಡ ಸಂಹಿತೆಯ(ಐಪಿಸಿ) ಸೆಕ್ಷನ್ 295-A(ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಈ ನಿಟ್ಟಿನಲ್ಲಿ ವಿಸ್ತೃತ ತನಿಖೆ ನಡೆಯುತ್ತಿದೆ ಎಂದರು.

ಪ್ರವಾದಿ ವಿರುದ್ಧ ಶರ್ಮಾ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಲ್ಲಿ ಶರ್ಮಾ ವಿರುದ್ಧ ಹಲವಾರು ಎಫ್‌ಐಆರ್‌ಗಳು ದಾಖಲಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com