ದೇಶ

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ 'ಕೈ' ನಾಯಕನ ವಿರುದ್ಧ ಕೇಸ್

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ 'ಕೈ' ನಾಯಕನ ವಿರುದ್ಧ ಕೇಸ್
ಶೇಕ್ ಹುಸೇನ್
Published On :

ಮುಂಬೈ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕನ ವಿರುದ್ಧ ನಾಗ್ಪುರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸಿದ್ದನ್ನು ವಿರೋಧಿಸಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ನಾಗ್ಪುರದ ಮಾಜಿ ಕಾಂಗ್ರೆಸ್ ಅಧ್ಯಕ್ಷ ಶೇಖ್ ಹುಸೇನ್ ಅವರು ಪ್ರಧಾನಿ ಮೋದಿಯನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದರು.

ಕಳೆದ ರಾತ್ರಿ ಶೇಖ್ ಹುಸೇನ್ ವಿರುದ್ಧ ದಾಖಲಾದ ಪ್ರಕರಣದಲ್ಲಿ ಆಕ್ಷೇಪಾರ್ಹ ಕೃತ್ಯ ಮತ್ತು ಉದ್ದೇಶಪೂರ್ವಕ ಅವಮಾನ, ಉದ್ದೇಶಪೂರ್ವಕವಾಗಿ ಶಾಂತಿ ಕದಡುವ ಆರೋಪಗಳನ್ನು ಪಟ್ಟಿ ಮಾಡಲಾಗಿದೆ. ನಾಗಪುರ ಬಿಜೆಪಿಯು ಹುಸೇನ್ ವಿರುದ್ಧ ದೂರು ನೀಡಿದೆ.

ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ನೀಡಿರುವ ಕುರಿತು ಸೋಮವಾರದಿಂದ ದೇಶಾದ್ಯಂತ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.