ಹೈದರಾಬಾದ್‌ನ ರಾಜಭವನಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೆರವಣಿಗೆಯನ್ನು ಪೊಲೀಸರು ತಡೆದರು
ಹೈದರಾಬಾದ್‌ನ ರಾಜಭವನಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೆರವಣಿಗೆಯನ್ನು ಪೊಲೀಸರು ತಡೆದರು

ರಾಹುಲ್ ಗಾಂಧಿ ಇಡಿ ವಿಚಾರಣೆ: ಹೈದರಾಬಾದ್ ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ, ನಾಯಕರ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸತತ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ದೇಶಾದ್ಯಂತ ಹಮ್ಮಿಕೊಂಡಿರುವ 'ಚಲೋ ರಾಜಭವನ' ಕರೆ ಹಿಂಸಾಚಾರದ ಸ್ವರೂಪ ಪಡೆದುಕೊಂಡಿದೆ.

ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸತತ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ದೇಶಾದ್ಯಂತ ಹಮ್ಮಿಕೊಂಡಿರುವ 'ಚಲೋ ರಾಜಭವನ' ಕರೆ ಹಿಂಸಾಚಾರದ ಸ್ವರೂಪ ಪಡೆದುಕೊಂಡಿದೆ.

ಹೈದರಾಬಾದ್ ನಲ್ಲಿ ಪಕ್ಷದ ಕಾರ್ಯಕರ್ತರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿ, ಟಿಎಸ್‌ಆರ್‌ಟಿಸಿ ಬಸ್‌ಗಳ ಗಾಜುಗಳನ್ನು ಒಡೆದಿದ್ದಾರೆ. ಟಿಪಿಸಿಸಿ ಅಧ್ಯಕ್ಷ ಎ ರೇವಂತ್ ರೆಡ್ಡಿ, ಶಾಸಕ ಟಿ ಜಗ್ಗಾ ರೆಡ್ಡಿ ಮತ್ತು ಇತರ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಸಂಸದ ರಾಹುಲ್ ಗಾಂಧಿ ವಿರುದ್ಧ ವಿಚಾರಣೆಯನ್ನು ಪ್ರತಿಭಟಿಸಲು ಕಾಂಗ್ರೆಸ್ ಕಾರ್ಯಕರ್ತರು ಖೈರಾರಾಬಾದ್‌ನಿಂದ ರಾಜಭವನದವರೆಗೆ ರ್ಯಾಲಿ ನಡೆಸಲು ಯೋಜಿಸಿತ್ತು. ಖೈರತಾಬಾದ್‌ನ ಪಿಜೆಆರ್ ಜಂಕ್ಷನ್‌ನಲ್ಲಿ ಪ್ರತಿಭಟನಾಕಾರರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದಾಗ, ಪೊಲೀಸರು ಅವರನ್ನು ಮುಂದೆ ಹೋಗದಂತೆ ತಡೆಯಲು ಪ್ರಯತ್ನಿಸಿದರು, ಇದು ಆ ಪ್ರದೇಶದಲ್ಲಿ ಮೋಟಾರ್‌ ಸೈಕಲ್‌ಗಳಿಗೆ ಬೆಂಕಿ ಹಚ್ಚಲು ಮತ್ತು ಬಸ್‌ಗಳಿಗೆ ಹಾನಿ ಮಾಡಲು ಕಾಂಗ್ರೆಸ್ ಕಾರ್ಯಕರ್ತರನ್ನು ಪ್ರಚೋದಿಸಿತು.

ಕಾಂಗ್ರೆಸ್ ಕಾರ್ಯಕರ್ತರು ಬಸ್ ಮೇಲೆ ಹತ್ತಿ ‘ಮೋದಿ ಡೌನ್ ಡೌನ್’ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರು ರಾಜಭವನಕ್ಕೆ ತೆರಳಲು ಯತ್ನಿಸಿದಾಗ ರೇವಂತ್ ರೆಡ್ಡಿ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಯಿತು.

Related Stories

No stories found.

Advertisement

X
Kannada Prabha
www.kannadaprabha.com