‘ಅಗ್ನಿಪಥ್’ ವಿರೋಧಿಸಿ ಪ್ರತಿಭಟನೆ: ಮೃತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಕೆಸಿಆರ್

ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಕುಟುಂಬಕ್ಕೆ 25 ಲಕ್ಷ ರೂ. ನೆರವು ಘೋಷಿಸಿದ್ದಾರೆ.
ಕೆ.ಚಂದ್ರಶೇಖರ್ ರಾವ್
ಕೆ.ಚಂದ್ರಶೇಖರ್ ರಾವ್

ಹೈದರಾಬಾದ್:  ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಕುಟುಂಬಕ್ಕೆ 25 ಲಕ್ಷ ರೂ. ನೆರವು ಘೋಷಿಸಿದ್ದಾರೆ.

ತೆಲಂಗಾಣದ ಸಿಕಂದರಾಬಾದ್‌ನಲ್ಲಿ ಹತ್ತೊಂಬತ್ತು ವರ್ಷದ ರಾಕೇಶ್ ಎಂಬಾತ ನಿನ್ನೆ ಹೊಸ ಅಲ್ಪಾವಧಿ ಸೇನಾ ನೇಮಕಾತಿ ಯೋಜನೆಯ ವಿರುದ್ಧ ಪ್ರತಿಭಟನೆಯ ವೇಳೆ ರೈಲಿಗೆ ಬೆಂಕಿ ಹಚ್ಚಿದ ಗುಂಪೊಂದರ ಮೇಲೆ ಪೊಲೀಸರು ಗುಂಡು ಹಾರಿಸಿದ್ದರಿಂದ ಹತ್ಯೆಗೀಡಾಗಿದ್ದಾನೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ರೈಲ್ವೆ ಪೊಲೀಸ್ ಫೈರಿಂಗ್‌ನಲ್ಲಿ ವಾರಂಗಲ್ ಮೂಲದ ರಾಕೇಶ್ ಸಾವನ್ನಪ್ಪಿದ್ದಕ್ಕಾಗಿ ಮುಖ್ಯಮಂತ್ರಿಗಳು ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಿದ್ದಾರೆ ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.ವ್ಯಕ್ತಿಯ ಕುಟುಂಬಕ್ಕೆ 25 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಮತ್ತು ಅವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಿಸಿದೆ.

ಯುವಕನ ಸಾವಿಗೆ ಕೇಂದ್ರದ “ತಪ್ಪು ನೀತಿ” ಯನ್ನು ದೂಷಿಸಿದ ಮುಖ್ಯಮಂತ್ರಿ ಕೆಸಿಆರ್ ರಾಜ್ಯ ಸರ್ಕಾರ ತೆಲಂಗಾಣದ ಮಕ್ಕಳನ್ನು ರಕ್ಷಿಸುತ್ತದೆ ಎಂದು ಒತ್ತಿ ಹೇಳಿದರು.ರಕ್ಷಣಾ ಸೇವೆಗಳಿಗೆ ನೇಮಕಾತಿಗಾಗಿ ಅಗ್ನಿಪಥ್ ಯೋಜನೆಯನ್ನು ಕೇಂದ್ರವು ಘೋಷಿಸಿದ ನಂತರ ಕಳೆದೆರಡು ದಿನಗಳಿಂದ ಪ್ರತಿಭಟನೆಗಳು ಭುಗಿಲೆದ್ದಿರುವ ಹಲವಾರು ರಾಜ್ಯಗಳಲ್ಲಿ ತೆಲಂಗಾಣವೂ ಸೇರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com