ಪ್ರಧಾನಿ ಮೋದಿ ‘ಮಾಫಿವೀರ್’ ಆಗುವ ಮೂಲಕ ಅಗ್ನಿಪಥ್ ಯೋಜನೆ ಹಿಂಪಡೆಯಬೇಕು: ರಾಹುಲ್ ಗಾಂಧಿ

ಸತತ ಎಂಟು ವರ್ಷಗಳಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ‘ಜೈ ಜವಾನ್, ಜೈ ಕಿಸಾನ್’ ಮೌಲ್ಯಗಳನ್ನು ಅವಮಾನಿಸಿದೆ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಕಿಡಿಕಾರಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಮುಂಬೈ: ಸತತ ಎಂಟು ವರ್ಷಗಳಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ‘ಜೈ ಜವಾನ್, ಜೈ ಕಿಸಾನ್’ ಮೌಲ್ಯಗಳನ್ನು ಅವಮಾನಿಸಿದೆ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನುಗಳನ್ನು ಹಿಂಪಡೆದಂತೆಯೇ ಯುವಕರ ಬೇಡಿಕೆಯನ್ನು ಒಪ್ಪಿಕೊಳ್ಳಬೇಕು ಮತ್ತು ಅಗ್ನಿಪಥ್ ರಕ್ಷಣಾ ನೇಮಕಾತಿ ಯೋಜನೆಯನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒತ್ತಾಯಿಸಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಪ್ರಧಾನಿ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ನಾನು ಮೊದಲೇ ಹೇಳಿದ್ದೆ. ಅದೇ ರೀತಿ ‘ಮಾಫಿವೀರ್’ ಆಗುವ ಮೂಲಕ ದೇಶದ ಯುವಕರ ಬೇಡಿಕೆಯನ್ನು ಒಪ್ಪಿಕೊಂಡು ‘ಅಗ್ನಿಪಥ’ ಯೋಜನೆಯನ್ನು ಹಿಂಪಡೆಯಬೇಕು ಎಂದು ಹೇಳಿದ್ದಾರೆ.

ಯೋಜನೆಯನ್ನು ಘೋಷಿಸಿದ ಸರ್ಕಾರ, 17 ರಿಂದ 21 ವರ್ಷ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸೇನೆ ಸೇರ್ಪಡೆಗೊಳಿಸಲಾಗುವುದು ಮತ್ತು ಶೇ. 25 ರಷ್ಟು ನೇಮಕಾತಿಗಳನ್ನು ನಿಯಮಿತ ಸೇವೆಗಾಗಿ ಉಳಿಸಿಕೊಳ್ಳಲಾಗುವುದು ಎಂದು ಹೇಳಿತ್ತು. ಈ ಹೊಸ ಯೋಜನೆ ವಿರುದ್ಧ ಯುವಕರ ಪ್ರತಿಭಟನೆ ವ್ಯಾಪಕವಾಗುತ್ತಿದ್ದಂತೆ ಗುರುವಾರ ಗರಿಷ್ಠ ವಯೋಮಿತಿಯನ್ನು 23 ವರ್ಷಕ್ಕೆ ಏರಿಸಲಾಗಿದೆ.

ಇನ್ನು ತೆಲಂಗಾಣ, ಕೇರಳ, ಬಿಹಾರ, ದೆಹಲಿ, ಉತ್ತಪ್ರದೇಶ ಹೀಗೆ ಹಲವು ರಾಜ್ಯಗಳಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆಗಳು ವ್ಯಾಪಕವಾಗುತ್ತಿದ್ದು, ಈಗಾಗಲೇ ಹಲವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾಕಾರರು ಪ್ರತಿಭಟನೆ ವೇಳೆ ಸಾಕಷ್ಟು ಸಾರ್ವಜನಿಕ ಆಸ್ತಿಗೆ ಹಾನಿಯನ್ನುಂಟು ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com