ಸಾಂದರ್ಭಿಕ ಚಿತ್ರ
ದೇಶ
ಒಡಿಶಾದಲ್ಲಿ ನಕ್ಸಲರ ಅಟ್ಟಹಾಸ: ದಾಳಿಯಲ್ಲಿ ಮೂವರು ಸಿಆರ್ ಪಿಎಫ್ ಯೋಧರು ಹುತಾತ್ಮ
ಒಡಿಶಾದ ನುವಾಪಾಡಾ ಜಿಲ್ಲೆಯಲ್ಲಿ ಮಂಗಳವಾರ ನಕ್ಸಲರು ಅಟ್ಟಹಾಸ ಮೆರೆದಿದ್ದು, ಭದ್ರತಾ ಪೋಸ್ಟ್ ನಲ್ಲಿ ಮಾವೋವಾದಿಗಳು ನಡೆಸಿದ ಹೊಂಚುದಾಳಿಯಲ್ಲಿ ಮೂವರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ...
ನುವಾಪಾಡಾ: ಒಡಿಶಾದ ನುವಾಪಾಡಾ ಜಿಲ್ಲೆಯಲ್ಲಿ ಮಂಗಳವಾರ ನಕ್ಸಲರು ಅಟ್ಟಹಾಸ ಮೆರೆದಿದ್ದು, ಭದ್ರತಾ ಪೋಸ್ಟ್ ನಲ್ಲಿ ಮಾವೋವಾದಿಗಳು ನಡೆಸಿದ ಹೊಂಚುದಾಳಿಯಲ್ಲಿ ಮೂವರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸಿಬ್ಬಂದಿಗಳಲ್ಲಿ ಒಬ್ಬರು ಸೈನಿಕರಾಗಿದ್ದು ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ(CRPF)ಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಶ್ರೇಣಿಯ ಸಿಬ್ಬಂದಿ ಎಂದು ಗುರುತಿಸಲಾಗಿದೆ.
ರಸ್ತೆ ತೆರೆಯುವ ಕಾರ್ಯದಲ್ಲಿ ತೊಡಗಿದ್ದ ಪಡೆಗಳ ಮೇಲೆ ಮಾವೋವಾದಿಗಳು ಸುಧಾರಿತ ಮತ್ತು ಕಚ್ಚಾ ಬ್ಯಾರೆಲ್ ಗ್ರೆನೇಡ್ ಲಾಂಚರ್‌ಗಳನ್ನು ಬಳಸಿ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
“ದುರದೃಷ್ಟವಶಾತ್, ನುವಾಪಾಡಾದಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ನಮ್ಮ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳುತ್ತಿದ್ದಾರೆ ಎಂದು ಒಡಿಶಾ ಪೊಲೀಸ್ ಮಹಾನಿರ್ದೇಶಕ ಎಸ್‌ಕೆ ಬನ್ಸಾಲ್ ಅವರು ಪಿಟಿಐಗೆ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ