ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ, ಅಮಿತಾ ಶಾ ಭೇಟಿ ಮಾಡಿದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ)ದ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಗುರುವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ ತಕ್ಷಣ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ದ್ರೌಪದಿ ಮುರ್ಮು - ಪ್ರಧಾನಿ ಮೋದಿ
ದ್ರೌಪದಿ ಮುರ್ಮು - ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ)ದ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಗುರುವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ ತಕ್ಷಣ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮುರ್ಮು ಅವರ ಉಮೇದುವಾರಿಕೆಯ ಬಗ್ಗೆ ದೇಶಾದ್ಯಂತ ಸಮಾಜದ ಎಲ್ಲಾ ವರ್ಗಗಳಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದ್ರೌಪದಿ ಮುರ್ಮು ಅವರು ಶುಕ್ರವಾರ ತಮ್ಮ ನಾಮಪತ್ರವನ್ನು ಸಲ್ಲಿಸುವ ನಿರೀಕ್ಷೆ ಇದ್ದು, ಅವರಿಗೆ ಮೋದಿ ಮೊದಲ ಸೂಚಕರಾಗಿ ಸಹಿ ಮಾಡುವ ಸಾಧ್ಯತೆ ಇದೆ.

ಈ ಕುರಿತು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದು, " ಇಂದು ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದೆ. ಅವರ ಉಮೇದುವಾರಿಕೆಯ ಬಗ್ಗೆ ಭಾರತದಾದ್ಯಂತ ಸಮಾಜದ ಎಲ್ಲಾ ವರ್ಗಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತಳಮಟ್ಟದ ಸಮಸ್ಯೆಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಭಾರತದ ಅಭಿವೃದ್ಧಿಯ ದೃಷ್ಟಿಕೋನ ಅತ್ಯುತ್ತಮವಾಗಿದೆ" ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com