ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಹರ್ಯಾಣ ಘಟಕದ ಮಾಜಿ ಮುಖ್ಯಸ್ಥೆ ಕುಮಾರಿ ಸೆಲ್ಜಾ ಮತ್ತು ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಅವರನ್ನು ಪಕ್ಷದ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ )ಯ ಸದಸ್ಯರನ್ನಾಗಿ ಗುರುವಾರ ನೇಮಿಸಿದ್ದಾರೆ.
ಮಾಜಿ ರಾಜ್ಯಸಭಾ ಸದಸ್ಯ ಟಿ ಸುಬ್ಬರಾಮಿ ರೆಡ್ಡಿ ಅವರನ್ನು ಖಾಯಂ ಆಹ್ವಾನಿತರನ್ನಾಗಿ ಮಾಡಲಾಗಿದ್ದು, ಮಾಜಿ ಯುಪಿಸಿಸಿ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಅವರನ್ನು ಸಿಡಬ್ಲ್ಯೂಸಿಗೆ ವಿಶೇಷ ಆಹ್ವಾನಿತರನ್ನಾಗಿ ನೇಮಿಸಲಾಗಿದೆ.
"ಕಾಂಗ್ರೆಸ್ ಅಧ್ಯಕ್ಷರು ಕುಮಾರಿ ಸೆಲ್ಜಾ ಮತ್ತು ಅಭಿಷೇಕ್ ಮನು ಸಿಂಘ್ವಿ ಅವರನ್ನು ಸಿಡಬ್ಲ್ಯೂಸಿ ಸದಸ್ಯರನ್ನಾಗಿ ನೇಮಿಸಿದ್ದಾರೆ" ಎಂದು ಪಕ್ಷದ ಅಧಿಕೃತ ಪ್ರಕಟಣೆ ತಿಳಿಸಿದೆ.
Advertisement