ವಾರಾಣಸಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಲಿಕಾಪ್ಟರ್ ಗೆ ಹಕ್ಕಿ ಡಿಕ್ಕಿ, ತುರ್ತು ಭೂಸ್ಪರ್ಶ
ವಾರಾಣಸಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ವಾರಾಣಸಿಯಲ್ಲಿ ತುರ್ತು ಭೂ ಸ್ಪರ್ಶವಾಗಿದೆ. ಇಂದು ಬೆಳಗ್ಗೆ ಹೆಲಿಕಾಪ್ಟರ್ ಟೇಕಾಫ್ ಆದ ನಂತರ ಹಕ್ಕಿ ಬಡಿದ ಹಿನ್ನೆಲೆಯಲ್ಲಿ ತುರ್ತು ಭೂ ಸ್ಪರ್ಶವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಘಟನೆ ನಂತರ ಮುಖ್ಯಮಂತ್ರಿ ಸರ್ಕಿಟ್ ಹೌಸ್ ಗೆ ಹಿಂತಿರುಗಿದ್ದು, ತದನಂತರ ವಿಮಾನದ ಮೂಲಕ ಲಖನೌಗೆ ಪ್ರಯಾಣಿಸಿದ್ದಾರೆ.
ವಿಮಾನ ನಿಲ್ದಾಣದಿಂದ ಟೇಕಾಫ್ ಆದ ನಂತರ ಲಖನೌಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ಹಕ್ಕಿ ಡಿಕ್ಕಿ ಹೊಡೆದಿದೆ. ಕೂಡಲೇ ತುರ್ತಾಗಿ ಲ್ಯಾಡಿಂಗ್ ಮಾಡಲು ಮನವಿ ಮಾಡಿರುವ ಪೈಲಟ್, ವಾರಾಣಸಿ ಪೊಲೀಸ್ ಲೈನ್ಸ್ ಮೈದಾನದಲ್ಲಿ ಸುರಕ್ಷಿತವಾಗಿ ಹೆಲಿಕಾಪ್ಟರ್ ಲ್ಯಾಡಿಂಗ್ ಮಾಡಿದ್ದಾರೆ. ಯಾವುದೇ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ರಾಜ್ ಶರ್ಮಾ ತಿಳಿಸಿದ್ದಾರೆ.
ಕಾಶಿ ವಿಶ್ವನಾಥ ದೇವಾಲಯಕ್ಕಾಗಿ ಯೋಗಿ ಆದಿತ್ಯನಾಥ್ ಶನಿವಾರ ವಾರಾಣಸಿಗೆ ಭೇಟಿ ನೀಡಿದ್ದರು. ಅಲ್ಲದೇ, ಪ್ರಗತಿ ಪರಿಶೀಲನಾ ಸಭೆ ಕೂಡಾ ನಡೆಸಿದ್ದರು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ