ಕೇಂದ್ರ ಚುನಾವಣಾ ಆಯೋಗದ ಕಚೇರಿ
ಕೇಂದ್ರ ಚುನಾವಣಾ ಆಯೋಗದ ಕಚೇರಿ

ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ: ಚುನಾವಣಾ ಆಯೋಗ

ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ತಿಳಿಸಿದೆ.

ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ತಿಳಿಸಿದೆ.

ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಉತ್ತರಾಧಿಕಾರಿಯನ್ನು ನಿರ್ಧರಿಸುವ ಚುನಾವಣೆಗೆ ಜುಲೈ 5 ರಂದು ಅಧಿಸೂಚನೆ ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದ್ದು, ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಎಂದು ಆಯೋಗ ಮಾಹಿತಿ ನೀಡಿದೆ. ಅಂತೆಯೇ ನಾಮಪತ್ರ ಹಿಂಪಡೆಯಲು ಜುಲೈ 22 ಕೊನೆಯ ದಿನವಾಗಿದೆ. ಚುನಾವಣೆ ಆಗಸ್ಟ್ 6 ರಂದು ನಡೆಯಲಿದ್ದು, ಅದೇ ದಿನ ಮತಗಳನ್ನು ಎಣಿಸಲಾಗುತ್ತದೆ ಎಂದು ಹೇಳಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರ ಸಭೆಯಲ್ಲಿ ಉಪರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಯಿತು.

ನಾಮನಿರ್ದೇಶಿತ ಸದಸ್ಯರನ್ನು ಒಳಗೊಂಡಂತೆ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಉಪ ರಾಷ್ಟ್ರಪತಿ ಚುನಾವಣೆಗಾಗಿ ಚುನಾವಣಾ ವ್ಯವಸ್ಥೆ ರಚಿಸುತ್ತಾರೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಉಪರಾಷ್ಟ್ರಪತಿ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳಲಿದೆ. 
 

Related Stories

No stories found.

Advertisement

X
Kannada Prabha
www.kannadaprabha.com