ಉದಯ್ ಪುರ ಹತ್ಯೆ ಪ್ರಕರಣ: ಜನರಲ್ಲಿ ಭಯ ಸೃಷ್ಟಿಸುವ ಉದ್ದೇಶ; ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಿದ ಎನ್ಐಎ
ನವದೆಹಲಿ: ಉದಯ್ ಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಭೀಕರ ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ದೇಶದ ಜನರಲ್ಲಿ ಭಯ ಉಂಟುಮಾಡುವುದು ಈ ಹತ್ಯೆಯ ಉದ್ದೇಶವಾಗಿತ್ತು ಎಂದು ಹೇಳಿದೆ.
ಸಂಸ್ಥೆಯ ವಕ್ತಾರರು ಮಾತನಾಡಿ, ತನಿಖಾ ತಂಡ ಉದಯ್ ಪುರಕ್ಕೆ ಈಗಾಗಲೇ ತೆರಳಿದ್ದು ತ್ವರಿತ ತನಿಖೆಗೆ ಕ್ರಮ ಕೈಗೊಳ್ಳಲಾಗಿದೆ. ಹಂತಕರು ಸಾಮಾಜಿಕ ಜಾಲತಾಣದಲ್ಲಿ ಹತ್ಯೆಗೆ ತಾವೇ ಹೊಣೆ ಹೊತ್ತಿದ್ದು, ಜನರಿಗೆ ಭಯ ಮೂಡಿಸಲು ಯತ್ನಿಸಿದ್ದಾರೆ ಎಂದು ಹೇಳಿದ್ದಾರೆ.
ಯುಎಪಿಎ ತಡೆ ಕಾಯ್ದೆಯ ಹಲವು ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಾರಂಭದಲ್ಲಿ ಪ್ರಕರಣವನ್ನು ಧನ್ಮಂಡಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿತ್ತು.
ಇದನ್ನೂ ಓದಿ: ಉದಯಪುರ ಹತ್ಯೆ ಪ್ರಕರಣ: ಬೆದರಿಕೆ ಕರೆ ದೂರು ನಿರ್ಲಕ್ಷ್ಯಿಸಿದ್ದ ಎಎಸ್ಐ ಅಮಾನತು
ಕನ್ಹಯ್ಯ ಲಾಲ್ ಭೀಕರ ಹತ್ಯೆಗೆ ಯೋಜನೆ ರೂಪಿಸಿದ ಆರೋಪದಡಿ ಐಪಿಸಿ ಸೆಕ್ಷನ್ 452, 302, 152 (ಎ) 153 (ಬಿ), 295 (A) 34ರ ಅಡಿಯಲ್ಲಿ ಹಾಗೂ ಯುಎಪಿಎಯ ಸೆಕ್ಷನ್ 16,18, 20, ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ