ಬಿಜೆಪಿ ವಿರುದ್ಧ ಒಂದಾಗಲು ಬಿಜೆಪಿಯೇತರ ಸಿಎಂ ಗಳಿಗೆ ಮಮತಾ ಬ್ಯಾನರ್ಜಿ ಪತ್ರ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಜೆಪಿಯೇತರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಬಿಜೆಪಿಯ ವಿರುದ್ಧ ಒಗ್ಗೂಡುವಂತೆ ಕರೆ ನೀಡಿದ್ದಾರೆ. 
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Updated on: 

ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಜೆಪಿಯೇತರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಬಿಜೆಪಿಯ ವಿರುದ್ಧ ಒಗ್ಗೂಡುವಂತೆ ಕರೆ ನೀಡಿದ್ದಾರೆ. 

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಮುಂದಿನ ದಾರಿಯ ಬಗ್ಗೆ ಚರ್ಚಿಸಲು ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿಯೇತರ ಸಿಎಂ ಗಳ ಸಭೆ ಕರೆದಿದ್ದಾರೆ.

ದೇಶಕ್ಕೆ ಯೋಗ್ಯವಾದ ಸರ್ಕಾರಕ್ಕೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ಒಗ್ಗಟ್ಟಿನ ವಿಪಕ್ಷದ ಉದ್ದೇಶಕ್ಕಾಗಿ ಬದ್ಧರಾಗಿರೋಣ, ಎಲ್ಲಾ ಪ್ರಗತಿಪರ ಶಕ್ತಿಗಳು ಒಂದಾಗುವುದು ಈಗಿನ ಅಗತ್ಯತೆ ಎಂದು ಬ್ಯಾನರ್ಜಿ ಹೇಳಿದ್ದಾರೆ. 

ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧದ ರಾಜಕೀಯ ಶಕ್ತಿಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿದ್ದಾರೆ. 2024 ರ ಲೋಕಸಭಾ ಚುನಾವಣೆಗೂ ಮುನ್ನ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ಜಂಟಿ ಚಳುವಳಿಯನ್ನು ನಡೆಸಲು ವಿಪಕ್ಷಗಳ ಗುಂಪು ರಚನೆಗೆ ಕಳೆದ ವರ್ಷ ಕರೆ ನೀಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com